ಮಾಚಿದೇವರ ಸ್ಮರಣೋತ್ಸವ ಸೆ.11ರಂದು ನಡೆಸಲು ನಿರ್ಧಾರ

Screenshot_2023-08-26-00-10-41-289_com.android.chrome.jpg
Published on

ದಾವಣಗೆರೆ: ವಿನೋಬಾನಗರದ ಶ್ರೀ ಮಾಚಿದೇವ ಸಮುದಾಯ ಭವನದಲ್ಲಿ ಸೆಪ್ಟೆಂಬರ್ 11ರಂದು ಶ್ರೀ ಮಡಿವಾಳ ಮಾಚಿದೇವರ ಸ್ಮರಣೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲು ಸಂಘದ ಜಿಲ್ಲಾಧ್ಯಕ್ಷ ಎಂ. ನಾಗೇಂದ್ರಪ್ಪ ಅಧ್ಯಕ್ಷತೆಯಲ್ಲಿ ಮಾಚಿದೇವ ಸಮುದಾಯ ಭವನದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಲಾಯಿತು.

ಮಡಿವಾಳ ಮಾಚಿದೇವ ಸಂಘ ಹಾಗೂ ಮಡಿಕಟ್ಟೆ ಸಮಿತಿ ಸಹಯೋಗದಲ್ಲಿ ಅಂದು ಬೆಳಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಮಧ್ಯಾಹ್ನ 11.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿವೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದ ಜಿಎಂ.ಸಿದ್ದೇಶ್ವರ ಹಾಗೂ ಡಾ. ಶಾಮನೂರು ಶಿವಶಂಕರಪ್ಪ ಹಾಗೂ ಇತರ ಶಾಸಕರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ಓಂಕಾರಪ್ಪ, ಸಹಕಾರ್ಯದರ್ಶಿ ಆರ್.ಎನ್. ಧನಂಜಯ, ಖಜಾಂಚಿ ಸುರೇಶ್ ಎಂ. ಕೋಗುಂಡೆ, ಉಪಾಧ್ಯಕ್ಷ ಪಿ. ಮಂಜುನಾಥ್, ಜಿ. ವಿಜಯಕುಮಾರ್, ಬಿ. ಅಜ್ಜಯ್ಯ, ಎಚ್. ದುಗ್ಗಪ್ಪ, ಪತ್ರಕರ್ತ ಎಂ.ವೈ. ಸತೀಶ್ ಇತರರಿದ್ದರು.

---

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net