ಮಾಜಿ ಯೋಧರಿಗೆ ತಾಲೂಕು ಆಡಳಿತ ನೆರವಾಗಲಿ

04arsph2ep
Published on

ಅರಸೀಕೆರೆ : ಭೂ ರಹಿತ ಮಾಜಿ ಯೋಧರ ನೆರವಿಗೆ ತಾಲೂಕು ಆಡಳಿತ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ನಗರದ ತಾಲೂಕು ಕಚೇರಿ ಆವರಣದ ರೈತ ಭವನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಮಾಜಿ ಸೈನಿಕರ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.

ಕರಿಕಲ್ ಉಕ್ಕಡ, ಬೆಳಗುಂಬ ಸರಹದ್ದಿಗೆ ಹೊಂದಿಕೊಂಡಂತೆ ಸಾವಿರಾರು ಎಕರೆ ಸರ್ಕಾರಿ ಜಮೀನು ಪಾಳು ಬಿದ್ದಿದೆ. ಕೆಲವರು ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದಾರೆ. ಕಂದಾಯ ಅಧಿಕಾರಿಗಳು ತಕ್ಷಣವೇ ಇತ್ತ ಗಮನಹರಿಸಿ ಅಗತ್ಯವಿರುವ ಜಮೀನು ವಶಕ್ಕೆ ಪಡೆದು ಮಾಜಿ ಸೈನಿಕರಿಗೆ ನೀಡಬೇಕು. ಇದರಿಂದ ಅವರ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು.

ತಹಸೀಲ್ದಾರ್ ವಿಭಾ ವಿ ರಾಥೋಡ್ ಮಾತನಾಡಿ, ಸಭೆಯ ನಿರ್ಣಯದಂತೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು. ಮಾಜಿ ಸೈನಿಕ ನವೀನ್ ಕುಮಾರ್, ಬಿಜೆಪಿ ರೈತ ಮೋರ್ಚಾ ಮುಖಂಡ ಮಲ್ಲಿಕಾರ್ಜುನ್ ಸೇರಿ ಹಲವರು ವಿವಿಧ ಬೇಡಿಕೆಗಳನ್ನು ಸಭೆಯ ಮುಂದಿಟ್ಟರು.

ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಹುಚ್ಚೇಗೌಡ, ಉಪ ತಹಸೀಲ್ದಾರ್ ಫಾಲಾಕ್ಷ ಸೇರಿ ಹಲವರು ವೇದಿಕೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net