ಮಾಜಿ ಶಾಸಕರಿಂದ ಪಕ್ಷಕ್ಕೆ ಆನೆಬಲ

24 bpt 2 shasakaru
Published on

ಬಂಗಾರಪೇಟೆ: ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ಕಾಂಗ್ರೆಸ್​ಗೆ ಸೇರ್ಪಡೆಯಾದ ನಂತರ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಹಾಲಿ ಶಾಸಕ ಎಸ್​.ಎನ್​.ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಆಲಂಬಾಡಿ ಜ್ಯೋತೇನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಿರಿಯ ಹಾಗೂ ಅನುಭವಿ ರಾಜಕಾರಣಿ ಎಂ.ನಾರಾಯಣಸ್ವಾಮಿ ಕಾಂಗ್ರೆಸ್​ ಸೇರಿದ ನಂತರ ನೆಮ್ಮದಿಯಾಗಿದ್ದಾರೆ. ಅವರ ಜತೆಯಲ್ಲಿಯೇ ಇದ್ದು ಬೆನ್ನಿಗೆ ಚೂರಿ ಹಾಕಿದವರೂ ಇದ್ದಾರೆ. ಕ್ಷೇತ್ರದಲ್ಲಿ ಅವರದ್ದೇ ಆದ ವರ್ಚಸ್ಸು ಇದೆ. ಜತೆಗೆ ಅವರದ್ದೇ ಆದ ಅಭಿಮಾನಿಗಳ ಬಳಗವೂ ಇದೆ. ಸೌಮ್ಯ ರಾಜಕಾರಣಕ್ಕೆ ಹೆಸರುವಾಸಿಯಾಗಿದ್ದವರನ್ನು ಹೀನಾಯವಾಗಿ ನಡೆಸಿಕೊಂಡಿದ್ದರು ಎಂದು ಪರೋಕ್ಷವಾಗಿ ಬಿಜೆಪಿ ಮುಖಂಡರಿಗೆ ಚಾಟಿ ಬೀಸಿದರು.

1996 ರಲ್ಲಿ ಕಾಂಗ್ರೆಸ್​ ಟಿಕೆಟ್​ ಸಿಗದಿದ್ದಾಗ "ಕಾರ್​" ಚಿಹ್ನೆಯಿಂದ ಎಂ.ನಾರಾಯಣಸ್ವಾಮಿ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದರು.ಆಗ ಪುರಸಭೆ ಸದಸ್ಯರಾಗಿದ್ದ ಸಮಯದಲ್ಲಿಯೇ ನಾವೆಲ್ಲಾ ಎಂ.ನಾರಾಯಣಸ್ವಾಮಿ ಅವರನ್ನು ಬೆಂಬಲಿಸಿದ್ದೆವು. 2004 ರ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿದ್ದ ಅವರನ್ನು ಗೆಲ್ಲಿಸಿದ್ದೆವು. ನಂತರದ ರಾಜಕೀಯ ಬದಲಾವಣೆಯಾಗಿ ಮತ್ತೆ ನಾವೇ ಅವರ ಮನೆಗೆ ಹೋಗಿ ಆಹ್ವಾನಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಸೇರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net