ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ನಿಧನ

saradagi 1
Published on

ಕಲಬುರಗಿ: ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (೮೧) ಮಂಗಳವಾರ ತಡರಾತ್ರಿ ನಿಧನ ಹೊಂದಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ದಿ.ಧರ್ಮಸಿಂಗ್ ಪರಮಾಪ್ತರಲ್ಲಿ ಒಬ್ಬರಾಗಿದ್ದರು.

ಕಲಬುರಗಿ ನಗರದಲ್ಲಿ ೧೯೪೪ ಜೂನ್ ೫ರಂದು ಜನಿಸಿದ್ದರು. ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಬಿ.ಎ.ಎಲ್‌ಎಲ್‌ಬಿ ಪದವಿ ಪಡೆದು, ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು.

ಕಳೆದ ಕೆಲವು ದಿನಗಳ ಹಿಂದೆ ತೀವ್ರ ಆರೋಗ್ಯ ಹದಗೆಟ್ಟಿದ್ದರಿಂದ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದಷ್ಟೆ ಕಲಬುರಗಿಗೆ ಮರಳಿ ತಂದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆ ಉಸಿರೆಳೆದಿದ್ದಾರೆ.

ಪತ್ನಿ, ಪುತ್ರ ಇರ್ಫಾನ್ ಅಹ್ಮದ್ ಸರಡಗಿ, ಪುತ್ರಿ ಡಾ.ಜಹೇರಾ ಸರಡಗಿ ಅವರನ್ನು ಸೇರಿ ಅಭಿಮಾನಿಗಳನ್ನು ಅಗಲಿದ್ದಾರೆ. ನಗರದ ಐವಾನ್- ಇ-ಶಾಹಿ ಪ್ರದೇಶದಲ್ಲಿರುವ ನಿವಾಸದಲ್ಲಿ ಇಡೀ ದಿನ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ. ಸಂಜೆ ೫ಗಂಟೆ ನಂತರ ನಗರದ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕಳೆದ ಹಲವು ತಿಂಗಳಿಂದ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಅಲ್ಲದೆ ಕಳೆದ ಎರಡು ವರ್ಷದಿಂದ ಸಕ್ರೀಯ ರಾಜಕಾರಣದಿಂದ ದೂರವಾಗಿದ್ದರು. ಗುಲ್ಬರ್ಗ ಸಾಮಾನ್ಯ ಲೋಕಸಭೆ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಯಾಗಿದ್ದರು. ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net