ಮಾಜಿ ಸಚಿವ ಪೂಜಾರಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ

images (11)
Published on

ಮಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿರುವ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮಕ್ಕೆ ಬಿರುವೆರ್ ಕುಡ್ಲ ಸಂಘಟನೆ ಉರ್ವ ಪೊಲೀಸರಿಗೆ ದೂರು ನೀಡಿದೆ.

ರಶೀದ್ ಟಿಪ್ಪು ಎಂಬ ಹೆಸರಿನ ವ್ಯಕ್ತಿ ಫೇಸ್‌ಬುಕ್ ಖಾತೆಯಲ್ಲಿ ಜನಾರ್ದನ ಪೂಜಾರಿಯವರ ವಿಚಾರದಲ್ಲಿ ಸಂದೇಶವೊAದನ್ನು ಹಾಕಿದ್ದಲದೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ. ಇದರ ವಿರುದ್ಧ ಬಿರುವೆರ್ ಕುಡ್ಲ ಸಂಘಟನೆ ಉರ್ವ ಪೊಲೀಸರಿಗೆ ನೀಡಿದ ದೂರಿನ ಹಿನ್ನಲೆಯಲ್ಲಿ ತನಿಖೆ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net