ಮಾಜಿ ಸಿಎಂ ವಿರುದ್ಧ ಬಿಜೆಪಿ ಆಕ್ರೋಶ, ದಲಿತರ ವಿರುದ್ಧ ಹಗುರವಾಗಿ ಮಾತಾಡಿದ ಆರೋಪ

N.3 Dhl BJP Prathibhatane News- ph 1 A
Published on

ದೇವನಹಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಅವರ ಮಾತುಗಳು ಹದ್ದು ಮೀರುತ್ತಿದ್ದು, ದಲಿತರ ಬಗ್ಗೆ ತಾತ್ಸಾರವಾಗಿ ಮಾತನಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಖಜಾಂಚಿ ಕೆ. ನಾಗೇಶ್ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಬಸ್ ನಿಲ್ದಾಣದಲ್ಲಿ ಬುಧವಾರ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನಾ ರ‌್ಯಾಲಿ ನಡೆಸಿ ಮಾಡಿದರು. ಮೈಸೂರಿನ ಕಾರ್ಯಕ್ರಮಮೊಂದರಲ್ಲಿ ಸಿದ್ದರಾಮಯ್ಯ, ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರುತ್ತಿದ್ದಾರೆ ಎಂದು ಹೇಳುವ ಮೂಲಕ ದಲಿತರನ್ನು ಅಪಮಾನಿಸಿದ್ದು, ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಎಸ್‌ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಹನುಮಂತಪ್ಪ ಮಾತನಾಡಿ, ಸಿದ್ದರಾಮಯ್ಯ ಜಾತಿವಾದಿಯಾಗಿದ್ದಾರೆ. ದಲಿತರು ಸಿಎಂ ಆಗುವುದನ್ನು ಇಷ್ಟಪಡುವುದಿಲ್ಲ. ಅವರ ಪಕ್ಷದವರೇ ಆದ ಜಿ. ಪರಮೇಶ್ವರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದವರು. ಬಿಜೆಪಿಯಿಂದ ಮಾತ್ರ ದಲಿತರ ಉದ್ಧಾರ ಸಾಧ್ಯ. ದಲಿತರನ್ನು ರಾಷ್ಟ್ರಪತಿ ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಕೇಂದ್ರದ ಸಚಿವ ಸಂಪುಟದಲ್ಲೂ ದಲಿತರಿಗೆ ಪ್ರಾಶಸ್ತ್ಯ ನೀಡಲಾಗಿದೆ ಎಂದರು.

ತಾಲೂಕು ಎಸ್‌ಸಿ ಮೋರ್ಚಾ ಅಧ್ಯಕ್ಷ ಮುನಿರಾಜು, ಯುವ ಮೋರ್ಚಾ ಅಧ್ಯಕ್ಷ ಮೋಹನ್, ಎಸ್‌ಟಿ ಮೋರ್ಚಾ ಅಧ್ಯಕ್ಷ ಅಮರನಾರಾಯಣ್, ಮುಖಂಡರಾದ ಲಕ್ಷ್ಮೀ, ದಾಕ್ಷಾಯಿಣಿ, ಸುರೇಶ್, ಪ್ರಸಾದ್, ಸೈನಿಕ ವೆಂಕಟೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net