ಹುಬ್ಬಳ್ಳಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಎಲ್ಲೆಡೆ ಖಾದಿ ಬಟ್ಟೆಯಿಂದ ತಯಾರಿಸಿದ ರಾಷ್ಟ್ರಧ್ವಜ ಹಾರಿಸುವಂತೆ ಇಲ್ಲಿನ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ ಆಗ್ರಹಿಸಿದ್ದಾರೆ. ಭಾನುವಾರದಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಖಾದಿಯಿಂದ ತಯಾರಿಸಿದ ರಾಷ್ಟ್ರಧ್ವಜವನ್ನು ನೀಡಿದ ರಜತ, ಈ ಬಗ್ಗೆ ಸರ್ಕಾರದ ಗಮನವನ್ನು ಸೆಳೆಯುವಂತೆ ಮನವಿ ಮಾಡಿದರು.