

ಮೈಸೂರು: ಮಾಜಿ ಸೈನಿಕ ಹಾಗೂ ಹಾಲಿ ಪೊಲೀಸ್ ಪೇದೆ ವಿ.ವಾಸು (42) ಭಾನುವಾರ ಹೃದಯಾಘಾತದಿಂದ ನಿಧನರಾದರು. ನಗರದ ಅಶೋಕಪುರಂ ಪೊಲೀಸ್ ಠಾಣೆ ಪೊಲೀಸ್ ಪೇದೆಯಾಗಿರುವ ಇವರು ರಾಘವೇಂದ್ರನಗರದ ನಿವಾಸಿಯಾಗಿದ್ದಾರೆ.
ವಾಸು ಶನಿವಾರ ರಾತ್ರಿ ಕೆಲಸ ಮುಗಿಸಿ ಬಂದವರಿಗೆ ಬೆಳಗ್ಗಿನ ಜಾವ 3 ಗಂಟೆಯಲ್ಲಿ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಮೃತಪಟ್ಟಿದ್ದಾರೆ.
ಮೃತರಿಗೆ ತಂದೆ, ತಾಯಿ, ಪತ್ನಿ ಮತ್ತು ಪುತ್ರ ಇದ್ದಾರೆ. ವಾಸುವ 22 ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಮಾಡಿದ್ದರು. ಈ ವೇಳೆ 12ನೇ ಮರಾಠ ಲೈಟ್ ಇನ್ಫೆಂಟ್ರಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮೂವರು ವರ್ಷದ ಹಿಂದ ಸೈನ್ಯದಿಂದ ನಿವೃತ್ತ ಹೊಂದಿದ ಇವರಿಗೆ ಮಾಜಿ ಸೈನಿಕ ಕೋಟಾದಡಿ ಪೊಲೀಸ್ ಪೇದೆ ಹುದ್ದೆಗೆ ಆಯ್ಕೆಯಾಗಿದ್ದು, ಶನಿವಾರವಷ್ಟೆ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದರು.
ಸೋಮವಾರ ಬೆಳಗ್ಗೆ 10 ಗಂಟೆಗೆ ಚಾಮುಂಡಿಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.