ಮಾದಕ ವಸ್ತು ದುಷ್ಪರಿಣಾಮದ ಜಾಗೃತಿ ಅಗತ್ಯ

05 HANUR 2
?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಹನೂರು: ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕಾನ್‌ಸ್ಟೆಬಲ್ ಚೈತ್ರಾ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಣೆ ವಿರೋಧಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾದಕ ವಸ್ತುಗಳ ಜೀವಕ್ಕೆ ಸಂಚಕಾರ ತಂದೊಡ್ಡುತ್ತವೆ. ಈ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೆ ಕೆಲವರು ಅದರಲ್ಲೂ ಯುವ ಪೀಳಿಗೆ ವಿವಿಧ ಕಾರಣಗಳಿಂದ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುತ್ತಿರುವುದು ನಿಜಕ್ಕೂ ವಿಪರ್ಯಾಸ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜತೆಗೆ ಸಮಾಜದಲ್ಲಿ ಸ್ವಾಸ್ಥ್ಯ ಹದಗೆಡುತ್ತದೆ. ಸಂಬಂಧಗಳು ಹಾಳಾಗುತ್ತವೆ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಂಡು ಜನರಲ್ಲಿ ಅರಿವು ಮೂಡಿಸಬೇಕು. ಹಾಗೆಯೇ ಬಾಲ್ಯ ವಿವಾಹ ಕಾನೂನಿನ ಪ್ರಕಾರ ಅಪರಾಧವಾಗಿದ್ದು, ಸಂಬಂಧಪಟ್ಟವರನ್ನು ಕಾನೂನಿನ ಶಿಕ್ಷೆಗೆ ಒಳಪಡಿಸಲಾಗುತ್ತದೆ. ಬಾಲ್ಯ ವಿವಾಹ ಆರೋಗ್ಯದ ಮೇಲೆ ದುಷ್ಪ್ಪರಿಣಾಮ ಬೀರುತ್ತದೆ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಅರಿವು ಹೊಂದಬೇಕು. ಬಾಲ್ಯ ವಿವಾಹಕ್ಕೆ ಮುಂದಾಗದಂತೆ ಪಾಲಕರಿಗೆ ತಿಳಿವಳಿಕೆ ನೀಡುವುದರ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಪೊಲೀಸರಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.

ಎಎಸ್ಸೈ ಕೃಷ್ಣ, ಸಿಬ್ಬಂದಿ ಕೀರ್ತಿ, ಮುಖ್ಯಶಿಕ್ಷಕ ಶಿವಲಿಂಗನಾಯ್ಕ, ಶಿಕ್ಷಕರಾದ ರಾಜು, ಕೃಷ್ಣ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net