ಮಾದಕ ವಸ್ತು ಪತ್ತೆಗೆ ಶ್ವಾನ ದಳ

11 ckm 4
ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ಬಳಿ ಇರುವ ರುದ್ರ ಎನ್ನುವ ಶ್ವಾನ ಕಾಲೇಜುಗಳಲ್ಲಿ ಮಾದಕ ವಸ್ತುಗಳು ಇವೆಯೇ ಎಂದು ತಪಾಸಣೆ ನಡೆಸುತ್ತಿರುವುದು.
Published on

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಪೊಲೀಸರು ಮಾದಕ ವಸ್ತುಗಳ ವಿರುದ್ಧ ಸಮರ ಸಾರಿದ್ದು, ದಿಟ್ಟ ಕ್ರಮ ಕೈಗೊಂಡಿದ್ದಾರೆ. ವಿಶೇಷ ಪರಿಣಿತಿ ಹೊಂದಿರುವ ಶ್ವಾನ ಬಳಸಿಕೊಂಡು ಶಾಲೆ, ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುಗಳ ಪರಿಶೀಲನೆ ನಿರಂತರವಾಗಿ ಆರಂಭಿಸಲಾಗಿದೆ.

ರುದ್ರ ಎಂಬ ಹೆಸರಿನ ಶ್ವಾನ ಈಗಾಗಲೇ ಕಾರ್ಯಾಚರಣೆ ಆರಂಭಿಸಿದೆ. ಕಾಲೇಜುಗಳ ತರಗತಿಗಳು ಸೇರಿದಂತೆ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪರಿಶೀಲನೆ ಆರಂಭಿಸಿದೆ. ಈ ಮೂಲಕ ಯುವ ಜನತೆ ಮಾದಕ ವಸ್ತುಗಳ ದಾಸರಾಗುವುದನ್ನು ತಡೆಯಲು ಕ್ರಮಕೈಗೊಳ್ಳಲಾಗುತ್ತಿದೆ.

ಮಾದಕ ವಸ್ತು ಮಾರಾಟಗಾರರು ಪ್ರಮುಖವಾಗಿ ಯವಜನತೆಯನ್ನೇ ಗುರಿಯಾಗಿಸಿಕೊಂಡಿರುತ್ತಾರೆ. ಈ ಜಾಲವನ್ನು ಭೇದಿಸುವುದು ಪೊಲೀಸರಿಗೆ ಸವಾಲಿನ ಕೆಲಸವೇ ಆಗಿರುತ್ತದೆ. ಜೊತೆಗೆ ಮಾದಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳನ್ನು ಸಾರ್ವಜನಿಕರು ಮಾಡುತ್ತಾರೆಯಾದರೂ ಯಾರೂ ಸಹ ಸೂಕ್ತ ಮಾಹಿತಿ ನೀಡುವುದಿಲ್ಲ. ಈ ಹಿನ್ನೆಲೆಯಲ್ಲಿ ತರಬೇತಿ ಪಡೆದ ಶ್ವಾನ ಬಳಸಿಕೊಂಡು ಪೊಲೀಸರು ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಸಮರ ಸಾರಿದ್ದಾರೆ.

ಚಿಕ್ಕಮಗಳೂರು ಪೊಲೀಸರ ಬತ್ತಳಿಕೆಯಲ್ಲಿರುವ ರುದ್ರ ಎಂಬ ಶ್ವಾನ ಮಾದಕ ವಸ್ತು ಪತ್ತೆ ಮಾಡುವಲ್ಲಿ ನಿಸ್ಸೀಮವಾಗಿದೆ. ಆರು ತಿಂಗಳು ಮಾದಕ ವಸ್ತು ಪತ್ತೆ ಬಗ್ಗೆ ತರಬೇತಿ ಪಡೆದಿರುವ ಈ ಶ್ವಾನ ಇದೀಗ ಚಿಕ್ಕಮಗಳೂರಿನಲ್ಲಿ ತನ್ನ ಕಾರ್ಯಾಚರಣೆ ಆರಂಭಿಸಿದೆ. ಶಾಲಾ ಕಾಲೇಜುಗಳು, ಸಮೀಪ ಇರುವ ಪೆಟ್ಟಿಗೆ ಅಂಗಡಿಗಳು, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳ ಆಸುಪಾಸು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿದಿನವೂ ರುದ್ರ ತಪಾಸಣೆ ನಡೆಸುತ್ತಿದೆ.

ಬಾಂಬ್ ನಿಷ್ಕಿöçಯ ದಳದಲ್ಲಿರುವ ಶ್ವಾನಗಳು ಸ್ಪೋಟಕ ಪತ್ತೆ ಮಾಡುವಲ್ಲಿ ನಿಸ್ಸೀಮವಾಗಿರುತ್ತವೆ. ಅದೇ ರೀತಿ ಚಿಕ್ಕಮಗಳೂರು ಪೊಲೀಸರ ಬಳಿ ಇರುವ ರುದ್ರ ಮಾದಕ ವಸ್ತುಗಳನ್ನು ಪತ್ತೆ ಮಾಡುವ ಬಗ್ಗೆ ವಿಶೇಷ ತರಬೇತಿ ಹೊಂದಿದೆ. ಗಾಂಜಾ ಹಾಗೂ ಸಿಂಥೆಟಿಕ್ ಡ್ರಗ್ಸ್ಗಳನ್ನು ಈ ಶ್ವಾನ ಸುಲಭವಾಗಿ ಪತ್ತೆ ಮಾಡುವ ಸಾಮರ್ಥ್ಯ ಹೊಂದಿರುವುದು ವಿಶೇಷ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಸ್‌ಪಿ ವಿಕ್ರಮ ಅಮಟೆ, ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸುತ್ತೇವೆ. ಈಗಾಗಲೇ ಹಲವು ಜನ ಜಾಗೃತಿ ಕಾರ್ಯಕ್ರಮ ನಡೆಸಿz್ದೆÃವೆ. ಸಾರ್ವಜನಿಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಮಾದಕ ವಸ್ತುಗಳ ಪತ್ತೆಗಾಗಿ ರುದ್ರ ಎನ್ನುವ ಶ್ವಾನವನ್ನು ಬಳಸಿಕೊಂಡಿz್ದÉÃವೆ. ಪ್ರತಿ ದಿನ ಈ ಶ್ವಾನ ಸಾರ್ವಜನಿಕ ಸ್ಥಳಗಳಲ್ಲಿ ತಪಾಸಣೆ ನಡೆಸಲಿದೆ ಎಂದು ಮಾಹಿತಿ ನೀಡಿದರು.

ದೂರು ನೀಡಲು ಕ್ಯೂಆರ್ ಕೋಡ್

ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆ ಕಂಡು ಬಂದಲ್ಲಿ ಸಾರ್ವಜನಿಕರು ನೇರವಾಗಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬಹುದಾಗಿದೆ. ಇದಕ್ಕಾಗಿಯೇ ಪೊಲೀಸ್ ಇಲಾಖೆಯಿಂದ ಕ್ಯೂ ಆರ್ ಕೋಡ್ ಮಾಡಲಾಗಿದ್ದು, ಜಿಲ್ಲೆಯ ಎಲ್ಲೆಡೆಯೂ ಇದನ್ನು ಪ್ರದರ್ಶಿಸಲಾಗಿದೆ.

ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಇದೇ ಕ್ಯೂಆರ್ ಕೋಡ್ ಸ್ಕಾÈನ್ ಮಾಡಿ ಪೊಲೀಸರಿಗೆ ಮಾಹಿತಿ ನೀಡಬಹುದಾಗಿದೆ. ಹೀಗೆ ಮಾಹಿತಿ ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿ ಇಡಲಾಗುತ್ತದೆ. ಇದರಿಂದಾಗಿ ಸಾರ್ವಜನಿಕರು ಯಾವುದೇ ಭಯವಿಲ್ಲದೆ ಪೊಲೀಸರಿಗೆ ಮಾಹಿತಿ ನೀಡುವ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಮಾಡಿದೆ.

ಮಾದಕ ವಸ್ತು ವಿರೋಧಿ ಸಮಿತಿ

ಮಾದಕ ವಸ್ತು ಜಾಲ ಪ್ರಮುಖವಾಗಿ ಯುವಜನತೆಯನ್ನೇ ಗುರಿಯಾಗಿಸಿಕೊಂಡಿರುತ್ತದೆ. ಅದರಲ್ಲಿಯೂ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನೇ ಬಲೆಗೆ ಬೀಳಿಸುವ ಕೆಲಸ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸರು ಜಿಲ್ಲೆಯ ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತು ವಿರೋಧಿ ಸಮಿತಿ ರಚನೆ ಮಾಡಿದ್ದಾರೆ.

ಈ ಸಮಿಯತಿಯಲ್ಲಿ ಶಾಲಾ ಕಾಲೇಜುಗಳ ಪ್ರಾಚಾರ್ಯರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳನ್ನೊಳಗೊಂಡ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ತಿಂಗಳಿಗೊಮ್ಮೆ ಸಭೆ ಸೇರಿ ಚರ್ಚೆ ನಡೆಸುತ್ತದೆ. ತನ್ನ ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆ ನಡೆಯುತ್ತಿದೆಯೇ, ಯಾರಾದರೂ ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆ ಮಾಡುತ್ತಿದ್ದಾರೆಯೇ ಎಂದು ನಿಗಾವಹಿಸುತ್ತಿದೆ. ಒಂದು ವೇಳೆ ಈ ರೀತಿಯ ಚಟುವಟಿಕೆಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗುತ್ತದೆ.

ಚಿಕ್ಕಮಗಳೂರು ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸುವುದೇ ಪೊಲೀಸ್ ಇಲಾಖೆಯ ಗುರಿ. ಹೀಗಾಗಿ ಜಿಲ್ಲೆಯ ಜನರಲ್ಲಿ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಇಲಾಖೆಗೆ ಮಾಹಿತಿ ನೀಡಬೇಕು. ಹೀಗೆ ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡುತ್ತೇವೆ. ಇದೀಗ ಪೊಲೀಸ್ ಇಲಾಖೆಗೆ ರುದ್ರ ಎಂಬ ಶ್ವಾನ ಸೇರ್ಪಡೆಯಾಗಿರುವುದು ಮಾದಕ ವಸ್ತುಗಳ ಪತ್ತೆಗೆ ಬಲ ಬಂದAತಾಗಿದೆ.

ವಿಕ್ರಮ ಅಮಟೆ, ಎಸ್‌ಪಿ ಚಿಕ್ಕಮಗಳೂರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net