ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ನಾಲ್ವರ ಬಂಧನ

Published on

ಕುಶಾಲನಗರ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸಿದ ನಾಲ್ವರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.


ಇತ್ತೀಚೆಗೆ ಗುಡ್ಡೆಹೊಸೂರುನಿಂದ ಸಿದ್ದಾಪುರ ಕಡೆಗೆ ಹೋಗುವ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಹೊಸತೋಟ ನಿವಾಸಿಗಳಾದ ಕೆ.ಎಚ್.ಫೈಜಲ್ (30), ಶರೀಫ್ (32), ಗೋಂದಿಬಸವನಹಳ್ಳಿ ನಿವಾಸಿ ಜಿ.ಎ.ಶಶಿಕುಮಾರ್ (31), ಗುಡ್ಡೆಹೊಸೂರು ನಿವಾಸಿ ವಿನೀಶ್ (28) ಎಂಬುವರನ್ನು ಪೊಲೀಸರು ಬಂಧಿಸಿ, 1 ಕೆಜಿ 160 ಗ್ರಾಂ ಗಾಂಜಾ ಮತ್ತು 6.5 ಗ್ರಾಂ ಎಂಡಿಎಂಎ ನಿಷೇಧಿತ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ.


ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಕುಶಾಲನಗರ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತ ಸಿಪಿಐ ಬಿ.ಜಿ.ಮಹೇಶ್, ಕುಶಾಲನಗರ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಪಿ.ಮೋಹನ್‌ರಾಜು ಹಾಗೂ ಸಿಬ್ಬಂದಿ ಒಳಗೊಂಡ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಹಲವು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಕಾರ್ಯಾಚರಣೆ ಮಾಡಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net