

ಚಿಕ್ಕಮಗಳೂರು: ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಸಮಿತಿಗಳನ್ನು ಕಡ್ಡಾಯವಾಗಿ ರಚಿಸುವ ಮೂಲಕ ಮಾದಕ ವಸ್ತು ವ್ಯಸನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು ಎಂದು ಎಸ್‌ಪಿ ವಿಕ್ರಮ ಅಮಟೆ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಆಶ್ರಯದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವಸತಿ ಶಾಲೆಗಳು ಹಾಗೂ ಜಿಲ್ಲಾ ವ್ಯಾಪ್ತಿಯ ಎಲ್ಲಾ ವಿದ್ಯಾರ್ಥಿ ನಿಲಯಗಳು ಮತ್ತು ಕ್ರೆÊಸ್ಟ್ ಅಧೀನದ ವಸತಿ ಶಾಲೆಗಳ ಪ್ರಾಚಾರ್ಯರು ಮತ್ತು ವಾರ್ಡನ್‌ಗಳಿಗೆ ಮಾದಕ ವಸ್ತು ವ್ಯಸನದ ದುಷ್ಪರಿಣಾಮಗಳು ಮತ್ತು ಪೋಕ್ಸೋ ಕಾಯ್ದೆ ಕುರಿತ ಕಾರ್ಯಾಗಾರವನ್ನುz್ದೆÃಶಿಸಿ ಮಾತನಾಡಿದರು.
ಹಿಂದೆ ರ‍್ಯಾಗಿಂಗ್ ವಿರೋಧಿ ಸಮಿತಿಗಳನ್ನು ರಚಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿತ್ತು. ರ‍್ಯಾಗಿಂಗ್ ಕಾಯ್ದೆ ರಚಿಸಿದ ಬಳಿಕ ಆ ಪಿಡುಗು ಸಂಪೂರ್ಣ ಕಡಿಮೆಯಾಗಿದೆ. ಅದೇ ರೀತಿ ಗೃಹ ಸಚಿವರ ನಿರ್ದೇಶನದ ಮೇರೆಗೆ ಮಾದಕವಸ್ತು ವಿರೋಧಿ ಜಾಗೃತಿ ಸಮಿತಿ ರಚಿಸಿ, ಆ ಮೂಲಕ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತು ವ್ಯಸನದ ಬಗ್ಗೆ ಅರಿವು ಮೂಡಿಸಿ ಅವರನ್ನು ಸಂವೇದನಾಶೀಲರನ್ನಾಗಿ ಮಾಡಬೇಕು ಎನ್ನುವ ಉz್ದÉÃಶ ಹೊಂದಲಾಗಿದೆ. ಈಗಾಗಲೇ ನಮ್ಮ ಪಾಲುದಾರ ಇಲಾಖೆಗಳಿಗೆ ಈ ಬಗ್ಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಆ ಸಮಿತಿಯ ಸ್ವರೂಪದ ಬಗ್ಗೆ ಈಗಾಗಲೇ ತಮ್ಮ ಸಂಸ್ಥೆಗಳಿಗೆ ಕಳುಹಿಸಿರುವ ಪತ್ರದಲ್ಲಿ ಮಾಹಿತಿ ನೀಡಲಾಗಿದೆ. ಅಲ್ಲಿನ ಪ್ರಾಚಾರ್ಯರು ಮುಖ್ಯಸ್ಥರಾಗಿರುತ್ತಾರೆ. ಇಬ್ಬರು ಬೋಧಕ ಸಿಬ್ಬಂದಿ ಸದಸ್ಯರಾಗಿರುತ್ತಾರೆ. ಇಬ್ಬರು ಹಿರಿಯ ವಿದ್ಯಾರ್ಥಿಗಳು ಇರುತ್ತಾರೆ. ಆ ಭಾಗದ ಬೀಟ್ ಪೊಲೀಸ್ ಸಿಬ್ಬಂದಿ, ಆ ವಿಭಾಗದ ಕಾನೂನು ಸುವ್ಯವಸ್ಥೆ ವಿಭಾಗದ ಸಬ್ ಇನ್ಸ್ಪೆಕ್ಟರ್ ಸಮಿತಿಯಲ್ಲಿರುತ್ತಾರೆ. ಈ ಸಮಿತಿ ಯಾವ ರೀತಿ ಕಾರ್ಯ ನಿರ್ವಹಿಸಬೇಕೆಂಬ ಬಗ್ಗೆ ನಂತರದಲ್ಲಿ ಮಾಹಿತಿ ನೀಡಲಾಗುವುದು ಎಂದು ಹೇಳಿದರು.
ಮಕ್ಕಳು ಈ ರೀತಿಯ ವ್ಯಸನಕ್ಕೆ ಒಳಗಾಗದೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂಬ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿ ಜಾಗೃತಿ ಮೂಡಿಸಿದಲ್ಲಿ ಮುಂದೆ ವಿದ್ಯಾರ್ಥಿಗಳು ಸಮಾಜದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬಹುದು. ಹಾಗೆಯೇ ಇಂತಹ ಸಾಮಾಜಿಕ ಪಿಡುಗುಗಳು ಶಿಕ್ಷಣ ಸಂಸ್ಥೆಗಳಿAದಲೇ ಹುಟ್ಟಿಕೊಳ್ಳುವಂತಾದರೆ ಅದು ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ದುರ್ವ್ಯಸನಗಳಿಗೆ ಒಳಗಾಗಬಾರದು. ಈ ಹಿನ್ನೆಲೆಯಲ್ಲಿ ಕಾರ್ಯ ನಿರ್ವಹಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಶಾಲಾ ಕಾಲೇಜುಗಳು ಹಾಗೂ ಹಾಸ್ಟೆಲ್‌ಗಳನ್ನು ಮಾದಕ ವಸ್ತುಗಳು ಮಾತ್ರವಲ್ಲದೆ ಮದ್ಯ ಹಾಗೂ ತಂಬಾಕು ಉತ್ಪನ್ನಗಳಿಂದ ಮುಕ್ತವಾಗಿಸಬೇಕು. ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅವುಗಳ ಬಳಕೆಗೆ ಆಗಲಿ, ಮಾರಾಟಕ್ಕೆ ಅವಕಾಶ ನೀಡಬಾರದು. ಅಂಥ ಬೆಳವಣಿಗೆಗೇನಾದರೂ ಕಂಡು ಬಂದರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಹನುಮಂತಪ್ಪ ಮಾತನಾಡಿ, ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಸಂಬAಧಿಸಿದAತೆ ೧೯೯೨ರಲ್ಲಿ ಅಂತಾರಾಷ್ಟಿçÃಯ ಸಮಾವೇಶದಲ್ಲಿ ಕೈಗೊಂಡ ತೀರ್ಮಾನಕ್ಕೆ ಭಾರತ ಸಹಿ ಹಾಕಿದೆ. ೨೦೧೨ರಲ್ಲಿ ಪೋಕ್ಸೋ ಕಾಯ್ದೆಯನ್ನು ಜಾರಿಗೊಳಿಸಲಾಯಿತು ಎಂದು ತಿಳಿಸಿದರು.
೧೮ ವರ್ಷದೊಳಗಿನ ಹೆಣ್ಣು ಹಾಗೂ ಗಂಡು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದರೆ ಅದು ಪೋಕ್ಸೋ ಕಾಯ್ದೆಯ ವ್ಯಾಪ್ತಿಗೆ ಬರುತ್ತದೆ. ೨೦೧೯ರಲ್ಲಿ ಕಾಯ್ದೆ ತಿದ್ದುಪಡಿಯಾದ ಬಳಿಕ ಕಠಿಣ ಕಾನೂನು ಜಾರಿಗೆ ಬಂದಿದೆ. ೧೬ವರ್ಷದೊಳಗಿನ ಮಕ್ಕಳ ಮೇಲೆ ಅದರಲ್ಲೂ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಲ್ಲಿ ಅಷ್ಟಕ್ಕೂ ಕೃತ್ಯ ಎಸಗಿದವರು ಸಂಬAಧಿಕರಾಗಿದ್ದರೆ ಮರಣ ದಂಡನೆ ವಿಧಿಸಲು ಕೂಡ ಈ ಕಾಯ್ದೆಯಲ್ಲಿ ಅವಕಾಶವಿದೆ ಎಂದು ಮಾಹಿತಿ ನೀಡಿದರು.
ಜಿಪಂ ಸಿಇಒ ಎಚ್.ಎಸ್.ಕೀರ್ತನಾ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಸುಜೆÉÃಂದ್ರ, ಬಾಲ ನ್ಯಾಯ ಮಂಡಳಿ ಸದಸ್ಯ ಚಂದ್ರಶೇಖರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಯಶೀಲ, ಎಎಸ್‌ಪಿ ಜಯಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ಮಾಲತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಿ.ಸಂತೋಷ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಆರ್. ರಮೇಶ್ ಉಪಸ್ಥಿತರಿದ್ದರು.