ಮಾದಕ ವಸ್ತುಗಳಿಂದ ದೂರವಿರಬೇಕು

25ANAND5
Published on

ಚಿಕ್ಕೋಡಿ: ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಚಿಕ್ಕೋಡಿ ಪೊಲೀಸ್ ವೃತ್ತ ನಿರೀಕ್ಷಕ ವಿಶ್ವನಾಥ ಚೌಗಲೆ ಕರೆ ನೀಡಿದರು.

ತಾಲೂಕಿನ ಮಜಲಟ್ಟಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಈಚೆಗೆ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣೆ ವಿರುದ್ಧದ ಅಂತಾರಾಷ್ಟ್ರೀಯ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಮಾದಕ ವಸ್ತುಗಳ ಸೇವೆನೆ ಅಥವಾ ಸಾಗಾಟ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ಇದನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅವಶ್ಯಕ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪನ್ಯಾಸಕ ವಿಶ್ವನಾಥ ಚೌಗಲಾ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ನಡುವಳಿಕೆ, ಸಂಸ್ಕಾರ ಮೈಗೂಡಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರ ಇದ್ದು, ಸುಸಂಸ್ಕೃತ ಸಮಾಜ ನಿರ್ಮಾಣ ಮಾಡಬೇಕೆಂದು ಕರೆ ನೀಡಿದರು.

ಎನ್.ಎಸ್.ಎಸ್ ಅಽಕಾರಿ ಹನುಮಂತ ಟಕ್ಕನ್ನವರ, ಶ್ರವಣ ಸನದಿ, ಘೋಸರವಾಡೆ, ಸತೀಶ ಯಶವಂತ, ಅಜಿತ್ ಬಸ್ಸರಗಿ, ಪ್ರಶಾಂತ ವಾಲೀಕಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net