ಮಾದಕ ವಸ್ತುಗಳಿಂದ ದೂರವಿರಿ

27 apr tnp 00
Published on

ತಿ.ನರಸೀಪುರ: ವಿದ್ಯಾರ್ಥಿ ಜೀವನದ ಅವಧಿಯಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿ ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಲು ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಜಿ.ಎಚ್.ಹನುಮಂತ ಸಲಹೆ ನೀಡಿದರು.

ತಾಲೂಕಿನ ತಲಕಾಡು ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಬಕಾರಿ ಇಲಾಖೆ ಮತ್ತು ಕಾಲೇಜಿನ ಐಕ್ಯೂಎಸಿ ಮತ್ತು ಯುವ ರೆಡ್‌ಕ್ರಾಸ್ ಘಟಕಗಳ ಸಹಯೋಗದಲ್ಲಿ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಾದಕ ವಸ್ತುಗಳು ವಿದ್ಯಾರ್ಥಿಯ ಭವಿಷ್ಯವನ್ನೇ ಸುಟ್ಟುಹಾಕುವುದರಿಂದ ಯುವಜನತೆ ಮಾದಕ ವಸ್ತುಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದರು.

ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಿಧಿಸುವ ದಂಡನೆ ಕುರಿತು ತಿ.ನರಸೀಪುರ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಕೆ.ಎನ್.ವೆಂಕಟೇಶ್ ತಿಳಿಸಿಕೊಟ್ಟರು. ನಂಜನಗೂಡು ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಎಂ.ಎನ್.ನಟರಾಜ್ ಅವರು ಅಬಕಾರಿ ಕಾಯ್ದೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಅಬಕಾರಿ ನಿರೀಕ್ಷಕಿ ಎ.ಸುಧಾರಾಣಿ, ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳು, ಕಾನೂನು ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಣೆ ನೀಡಿದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ತೊಟ್ಟವಾಡಿ ಮಹದೇವಸ್ವಾಮಿ ಮಕ್ಕಳಿಗೆ ಕಾನೂನುಗಳ ಬಗ್ಗೆ ತಿಳಿಸಿಕೊಟ್ಟರು.

ತಲಕಾಡು ಕಾಲೇಜಿನ ಪ್ರಾಂಶುಪಾಲ ಡಾ.ಎನ್.ವಸಂತರಾಜು, ಅಬಕಾರಿ ಉಪ ನಿರೀಕ್ಷಕ ಬಿ.ಪಿ.ಶಿವಪ್ರಕಾಶ, ಅಬಕಾರಿ ಹೆಡ್ ಕಾನ್‌ಸ್ಟೇಬಲ್ ಎಂ.ರಮೇಶ್, ಎಂ.ಮಹಾಲಿಂಗಪ್ಪ, ಪರಶಿವಮೂರ್ತಿ, ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಂಚಾಲಕ ಡಾ.ಪಿ.ಶೇಖರ, ಕಾಲೇಜಿನ ಐಕ್ಯೂಎಸಿ ಘಟಕದ ಸಂಚಾಲಕಿ ಡಾ.ಎಸ್.ಅಶ್ವಿನಿ, ಪತ್ರಾಂಕಿತ ವ್ಯವಸ್ಥಾಪಕ ಮಹೇಶ್, ಅಧ್ಯಾಪಕರಾದ ಡಾ.ಎಂ.ಮಹದೇವಪ್ರಭು, ನಾಗಣ್ಣ, ರವಿಕುಮಾರ್, ಸಿ.ಎನ್.ನವೀನ್ ರಾವ್, ಮಹಾದೇವಮ್ಮ, ಆರ್.ಚಲುವರಾಜು, ಕೃಷ್ಣ ಕುಮಾರಿ, ಕೆಂಪಣ್ಣ, ಬೋಧಕೇತರ ಸಿಬ್ಬಂದಿ ರಮೇಶ್, ತೇಜೋಮೂರ್ತಿ, ಮಹೇಶ್, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net