ಮಾದಪ್ಪನ ದರ್ಶನ ಪಡೆದ ತ.ನಾಡಿನ ಎಡಿಜಿಪಿ

17 HANUR 3
Published on

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಇತ್ತೀಚೆಗೆ ತಮಿಳುನಾಡಿನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯರಾಮ್ ಭೇಟಿ ನೀಡಿ ದೇವರ ದರ್ಶನ ಪಡೆದರು.


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲೂಕಿನವರಾದ ಅವರು, ಒಂದು ವರ್ಷದಿಂದ ತಮಿಳುನಾಡು ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ದೇಗುಲಕ್ಕೆ ಆಗಮಿಸಿದ ಅವರು, ಸಾಲೂರು ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಜತೆಯಲ್ಲಿ ಉತ್ಸವದ ದಂಡಿನ ಕೋಲನ್ನು ಹೊತ್ತು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಬಳಿಕ ದೇಗುಲದ ಒಳಾಂಗಣದಲ್ಲಿ ರಜ ಹೊಡೆಯುವ ಸೇವಾ ಕಾರ್ಯವನ್ನು (ಕಸ ಗೂಡಿಸುವುದು) ಸಾಮಾನ್ಯರಂತೆ ನೆರವೇರಿಸಿದರು. ಬಳಿಕ ಸಾಲೂರು ಮಠಕ್ಕೂ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net