ಮಾದರಿಯಾಗಿದೆ ಹೋರಾಟ

2 kurugodu 01
Published on

ಕುರುಗೋಡು: ಮಹಾತ್ಮ ಗಾಂಧಿ ಅವರು ಅಹಿಂಸಾ ಮಾರ್ಗದಲ್ಲಿನ ಹೋರಾಟದ ನೇತೃತ್ವ ವಹಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು, ಅವರ ಬದುಕು ಮತ್ತು ಹೋರಾಟ ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ ಹೇಳಿದರು.

ಬೈಲೂರು ಗ್ರಾಮದಲ್ಲಿ ಆಯೋಜಿಸಿದ್ದ ಮಹಾತ್ಮಾ ಗಾಂಧಿ ಹಾಗೂ ಬಹಾದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದರು. ಜಗತ್ತಿನಲ್ಲಿ ಶಾಂತಿ, ಅಹಿಂಸೆಯ ಬಗ್ಗೆ ಮಾತನಾಡುವಾಗ ಮೊದಲು ನೆನಪಾಗುವುದೇ ಮಹಾತ್ಮ ಗಾಂಧಿ. ಸ್ವಾತಂತ್ರ್ಯ ಹೋರಾಟದ ಹಾದಿಯಲ್ಲಿ ಅಹಿಂಸೆಯನ್ನು ಪ್ರತಿಪಾದಿಸುತ್ತ ಜೀವನವನ್ನು ರಾಷ್ಟ್ರಕ್ಕಾಗಿ ಮುಡಿಪಾಗಿಟ್ಟರು ಎಂದರು. ಪ್ರಮುಖ ನಟರಾಜ್ ಗೌಡ, ಪ್ರಾಥಮಿಕ ಶಾಲೆ ಎಸ್ಡಿಎಂಸಿ ಅಧ್ಯಕ್ಷ ಮಲ್ಲಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net