ಮಾದಾರ ಚನ್ನಯ್ಯ ರಾಜಕೀಯ ಮಠವಲ್ಲ

Narayanaswamy-0001
Published on

ಚಿತ್ರದುರ್ಗ: ಜಾತ್ಯತೀತ, ಪಕ್ಷಾತೀತವಾಗಿ ಸಮಾಜದಲ್ಲಿ ಜಾಗೃತಿ ಮೂಡಿಸುತ್ತಿರುವ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠ ಯಾವ ರಾಜಕೀಯ ಪಕ್ಷಕ್ಕೂ ಸೀಮಿತವಾಗುವುದಿಲ್ಲ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಬಿಜೆಪಿಗೆ ಕರೆತರುವ ಯಾವುದೇ ಚರ್ಚೆ ನಡೆದಿಲ್ಲ. ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ಸಿಕ್ಕರೂ ಕಮಲವೇ ಅಭ್ಯರ್ಥಿ ಎಂದರು.

ರಾಜ್ಯದ ಪ್ರತಿ ಬೂತ್‌ನಲ್ಲೂ ಕಮಲ ಅರಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲಿದ್ದೇವೆ ಎಂದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯಸಭಾ ಚುನಾವಣೆ ಸೋಲಿನ ಭೀತಿ ಕಾಡುತ್ತಿದ್ದು, ತಮ್ಮ ಪಕ್ಷದ ಶಾಸಕರ ಮೇಲೆ ನಂಬಿಕೆ ಇಲ್ಲದ ಕಾರಣ ರೆಸಾರ್ಟ್‌ಗೆ ಕರೆದೊಯ್ದಿದ್ದಾರೆ. ಲೋಕಸಭೆಯೂ ಇದಕ್ಕೆ ಹೊರತಾಗಿಲ್ಲ. ಹೀಗಾಗಿ ಅನ್ಯ ಪಕ್ಷದವರನ್ನು ಸೆಳೆಯುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದ್ಯಾವುದು ಫಲಿಸುವುದಿಲ್ಲ ಎಂದು ಟೀಕಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net