

ಹಾಸನ: ಲೋಕಸಭೆ ಚುನಾವಣೆಯಲ್ಲಿ ಜೀಲ್ಲೆಯಲ್ಲಿರುವ ಮಾದಿಗ ಸಮಾಜ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ಅವರನ್ನು ಬೆಂಬಲಿಸಿ ಗೆಲ್ಲಿಸಲು ಮಾದಿಗ ಸಂಘಟನೆಗಳಿಂದ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಚ್.ಪಿ. ಶಂಕರ್ ರಾಜು ತಿಳಿಸಿದರು.
ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಮಾದಿಗ ಸಮುದಾಯವು ಸಮಾಜದ ಅತ್ಯಂತ ಕಟ್ಟಕಡೆಯ ಸಮುದಾಯವಾಗಿದೆ. ಇವರ ಕಸುಬು ಚರ್ಮ ಹದ ಮಾಡುವವರು, ಸ್ವಚ್ಚತಾ ಕಾರ್ಯ ಮಾಡುವ ಕಾರ್ಮಿಕರು ಹಾಗೂ ಕೃಷಿ ಕಾರ್ಮಿಕರು ಹೆಚ್ಚಾಗಿದ್ದು, ಅವರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮಾಜದ ಅಭಿವೃದ್ಧಿಗೆ ಬಿಜೆಪಿ, ಜೆಡಿಎಸ್ ಆದ್ಯತೆ ನೀಡಿಲ್ಲ.ಆದ್ದರಿಂದ ಕಾಂಗ್ರಸ್ ಬೆಂಬಲಿಸಉವಂತೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ನ್ಯಾಯಮೂರ್ತಿ ಎ.ಜೆ.ಸದಾಶಿವರವರ ಆಯೋಗ 2012ರಲ್ಲಿ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ 2024ರಲ್ಲಿ ಎ.ಜೆ. ಸದಾಶಿವ ವರದಿಯನ್ನು ಅಂಗೀಕರಿಸಿ ಮಾದಿಗ ಸಮುದಾಯಕ್ಕೆ ಅನುಕೂಲ ಮಾಡುವಂತೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿತು. ಆದರೆ ಮಾದಿಗ ಸಮುದಾಯದ ಬಗ್ಗೆ ಕೇವಲ ಮೊಸಳೆ ಕಣ್ಣೀರು ಸುರಿಸುವ ಬಿಜೆಪಿ, ಜೆಡಿಎಸ್ ಸರ್ಕಾರ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಯಾವುದೇ ಕ್ರಮ ಕೈಗೊಳ್ಳದೆ ಮೀನಮೇಷ ಎಣಿಸುತ್ತಿದೆ ಎಂದು ದೂರಿದರು.
ಕಾಂಗ್ರಸ್ ಸರ್ಕಾರ ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರ ಮೂಲಕ ನುಡಿದಂತೆ ನಡೆಯುತ್ತಿದೆ. ಅಲ್ಲದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಇನ್ನೂ 25 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿಕೊಂಡಿದೆ. ಆದುದರಿಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ-ಜೆಡಿಎಸ್ ಸರ್ಕಾರವನ್ನು ತಿರಸ್ಕರಿಸಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರಿಗೆ ಮತ ನೀಡಲು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಚ್.ಎಂ. ಮಹೇಶ್, ಸಂಘಟನಾ ಕಾರ್ಯದರ್ಶಿ ದಾಸಪ್ಪ ಮಾಡಳ್, ಎಸ್. ವಸಂತಕುಮಾರ್ ಲಕ್ಕ, ಎ.ಟಿ. ಮಂಜುನಾಥ್, ಶ್ರೀನಿವಾಸ್, ಭಾಸ್ಕರ್ ಇತರರು ಇದ್ದರು.