ಮಾನವ ಉಳಿವಿಗಾಗಿ ಹಸಿರು

05 YERRISWAMY 03
Published on

ಬಳ್ಳಾರಿ : ಮಾನವನ ಉಳಿವಿಗಾಗಿ ಪರಿಸರ ಸಂರಕ್ಷಣೆ ಅತ್ಯವ್ಯಶಕವಾಗಿದೆ ಎಂದು ವೀರಶೈವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ದರೂರು ಶಾಂತನಗೌಡ ಹೇಳಿದರು.
ನಗರದ ವೀರಶೈವ ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗ ಹಾಗೂ ಎನ್‌ಎಸ್‌ಎಸ್ ವಿಭಾಗ ಸಹಯೋಗದೊಂದಿಗೆ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪರಿಸರ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ನಾಶ ಹೊಂದುತ್ತಿದ್ದು . ಮುಂದಿನ ಪೀಳಿಗೆ ಉಳಿಯಲು ಪರಿಸರ ಸಂರಕ್ಷಣೆ ಮಾಡುವುದು ಸಾರ್ವತ್ರಿಕ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net