ಮಾನವ ಪ್ರಾಣಿ ಸಂಘರ್ಷ ತಗ್ಗಿಸಿದ ನೀರಿನ ತೊಟ್ಟಿಗಳು

15 yerriswamy 05
?????????????????????????????????????????????????????????????????????????????????????????????????????????????????????????????????????????????????
Published on

ಬಳ್ಳಾರಿ : ಸಂಡೂರು ತಾಲೂಕಿನ ಎರಡೂ ವಲಯಗಳಲ್ಲಿ ನೀರಿನ ಕೊರತೆ ನೀಗಿಸಲು ಅರಣ್ಯ ಇಲಾಖೆಯು ಎಲ್ಲ ಕಾಡುಗಳ ಆಯಕಟ್ಟಿನ ಸ್ಥಳಗಳಲ್ಲಿ ವಿಶಾಲವಾದ ನೀರು ತೊಟ್ಟಿಗಳನ್ನು ನಿರ್ಮಿಸಿ ಕಾಲಕಾಲಕ್ಕೆ ನೀರು ತುಂಬಿಸಿದ್ದರಿಂದ ಮೊದಲ ಬಾರಿಗೆ ತಾಲೂಕಿನಲ್ಲಿ ಮಾನವ ಮತ್ತು ವನ್ಯ ಪ್ರಾಣಿಗಳ ನಡುವಿನ ಸಂಘರ್ಷವನ್ನು ತಪ್ಪಿಸಲಾಗಿದೆ ಎಂದು ಬಳ್ಳಾರಿ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ ತಿಳಿಸಿದ್ದಾರೆ.
ಸಂಡೂರಿನ ಕಾಡುಗಳಲ್ಲಿ ಚಿರತೆ, ಕರಡಿ, ಕೊಂಡುಕುರಿ, ಕಾಡುಹಂದಿ, ಮುಳ್ಳುಹಂದಿ, ತಾಳೆ ಪುನುಗು, ಚುಕ್ಕೆ ಪುನುಗು, ಕೆಂಪು ಮೂತಿಯ ಮಂಗ, ಕೋಡುಗ, ಮುಂಗುಸಿ ಮುಂತಾದ ಸಸ್ತನಿಗಳು, ವಿವಿಧ ಸರೀಸೃಪಗಳು ಹಾಗೂ ಅಪಾರ ಸಂಖ್ಯೆಯ ಹಕ್ಕಿಗಳಿದ್ದು, ಬೇಸಿಗೆಯಲ್ಲಿ ನೀರಿನ ಅವಶ್ಯಕತೆ ಹೆಚ್ಚು ಇದ್ದು, ಕಾಡಿನಲ್ಲಿರುವ ಕೆರೆ ಕಟ್ಟೆಗಳು, ಚೆಕ್ಡ್ಯಾಂಗಳಲ್ಲಿ ನೀರು ಬತ್ತಿಹೋದ ನಂತರ ಪ್ರಾಣಿ-ಪಕ್ಷಿಗಳು ನೀರನ್ನು ಹರಸಿ ಕೃಷಿಭೂಮಿ ಹಾಗೂ ಜನ ವಸತಿ ಪ್ರದೇಶದ ಕಡೆಗೆ ಬಂದಾದ ಮನುಷ್ಯನ ಮೇಲೆ ಉದ್ದೇಶ ಪೂರ್ವಕವಲ್ಲದ ದಾಳಿ ನಡೆಯುವ ಸಾಧ್ಯತೆ ತಪ್ಪಿಸಲು ಅರಣ್ಯ ಇಲಾಖೆ ವತಿಯಿಂದ ಈ ಕಾರ್ಯ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವನ್ಯಜೀವಿ ಸಂಶೋಧಕ ಡಾ.ಸಮದ್ ಕೊಟ್ಟೂರು ಮಾತನಾಡಿ, ನೀರಿನ ತೊಟ್ಟಿಗಳ ಹಾಗೂ ಸುತ್ತಮುತ್ತ ಕಾಡು ಪ್ರಾಣಿಗಳ ಚಲನವಲನ ಅಧ್ಯಯನಿಸಿ ಆಯ್ದ ನೀರಿನ ತೊಟ್ಟಿಗಳ ಸುತ್ತಮುತ್ತ ಸುಮಾರು 30 ಕ್ಯಾಮೆರಾ ಟ್ರಾಪ್ಗಳನ್ನು ಕಟ್ಟಿ ಅಲ್ಲಿಗೆ ಬರುವ ಪ್ರಾಣಿಗಳನ್ನು ದಾಖಲಿಸಿದ್ದಾರೆ. ಗಣಿ ಪ್ರದೇಶದ ಸುತ್ತಲೂ ಸಹ ನೀರಿನ ತೊಟ್ಟಿಗಳನ್ನು ನಿರ್ಮಿಸಲಾಗಿದ್ದು, ಅಲ್ಲಿಯೂ ಸಹ ಎಲ್ಲಾ ವನ್ಯಜೀವಿಗಳ ಸಂಚರಿಸಿ ಈ ತೊಟ್ಟಿಗಳ ನೀರನ್ನು ಕುಡಿಯುವುದನ್ನು ದಾಖಲಿಸಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ವಿವಿಧ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ನೀರಿನ ತೊಟ್ಟಿಗಳನ್ನು ನಿರ್ಮಿಸಲಾಗುವುದು. ಅಲ್ಲದೇ ವನ್ಯಜೀವಿಗಳು ಸೇವಿಸುವ ಸ್ಥಳೀಯ ಹಣ್ಣಿನ ಮರಗಿಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಳಿಸಿ, ಅರಣ್ಯದ ಜೀವ ವೈವಿಧ್ಯತೆಯನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net