ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಂದ ದೂರು ಆಲಿಕೆ ವಿಚಾರಣೆ 16 ರಿಂದ ಆರಂಭ

human rights
Published on


ಕಲಬುರಗಿ: ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣದಲ್ಲಿ ನೊಂದವರಿಗೆ ನ್ಯಾಯ ದೊರಕಿಸಲು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳನ್ನೊಳಗೊಂಡ ಪೀಠ ಜ.೧೬ ರಿಂದ ೨೦ರ ವರೆಗೆ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ ಹಾಗೂ ಬೀದರ ಜಿಲ್ಲೆಯಲ್ಲಿ ಸಿಟ್ಟಿಂಗ್ಸ್ ನಡೆಸಿ ಸಾರ್ವಜನಿಕರ ಅಹವಾಲು ಆಲಿಸಿ ಸ್ಥಳದಲ್ಲಿಯೇ ವಿಲೇವಾರಿ ಮಾಡಲಿದೆ. ಕಲಬುರಗಿಯಲ್ಲಿ ಜ.೧೬, ೧೭ ಹಾಗೂ ೨೦ ರಂದು, ಯಾದಗಿರಿ ಜಿಲ್ಲೆಯಲ್ಲಿ ಜ.೧೮ ಹಾಗೂ ಬೀದರ್ ಜಿಲ್ಲೆಯಲ್ಲಿ ಜ.೧೯ರಂದು ಆಯೋಗದ ಪೀಠ ಸಿಟ್ಟಿಂಗ್ಸ್ ನಡೆಸಲಿದೆ. ಸಾರ್ವಜನಿಕರು, ಸಂಘ, ಸಂಸ್ಥೆಗಳಿAದ ಅಹವಾಲು ಆಲಿಸಿ, ಸ್ಥಳದಲ್ಲೇ ಪ್ರಕರಣ ವಿಲೇವಾರಿ ಮಾಡಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net