ಮಾನವನಿಗೆ ಆರೋಗ್ಯವೇ ಮಹಾಭಾಗ್ಯ

2 ckm 3
ಚಿಕ್ಕಮಗಳೂರು ತಾಲೂಕಿನ ಮುಗುಳುವಳ್ಳಿ ಗ್ರಾಮದಲ್ಲಿ ರೋಟರಿ ಕಾಫಿಲ್ಯಾಂಡ್, ರೋಟರಾಕ್ಟ್-ಸಿಐಎಂಎಸ್ ಹಾಗೂ ಮುಗುಳುವಳ್ಳಿ ಗೌರಮ್ಮ ಗಣಪತಿ ಸೇವಾ ಸಮಿತಿ ಸಹಯೋಗದಲ್ಲಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಉಚಿತ ಗ್ರಾಮೀಣ ಆರೋಗ್ಯ ಶಿಬಿರ ನಡೆಸಲಾಯಿತು.
Published on

ಚಿಕ್ಕಮಗಳೂರು: ಮನುಷ್ಯನ ಒತ್ತಡದ ಕೆಲಸ ಕಾರ್ಯಗಳ ನಡುವೆ ಉತ್ತಮ ಆಹಾರ ಪದ್ಧತಿ, ವ್ಯಾಯಾಮ, ಆರೋಗ್ಯಕರ ಜೀವನ ಶೈಲಿ ಅಳವಡಿಸಿಕೊಂಡು ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ರೋಟರಿ ಕಾಫಿಲ್ಯಾಂಡ್ ಅಧ್ಯಕ್ಷ ನಾಗೇಶ್ ಕೆಂಜಿಗೆ ತಿಳಿಸಿದರು.

ತಾಲೂಕಿನ ಮುಗುಳುವಳ್ಳಿ ಗ್ರಾಮದಲ್ಲಿ ರೋಟರಿ ಕಾಫಿಲ್ಯಾಂಡ್, ರೋಟರಾಕ್ಟ್-ಸಿಐಎಂಎಸ್ ಹಾಗೂ ಮುಗುಳುವಳ್ಳಿ ಗೌರಮ್ಮ ಗಣಪತಿ ಸೇವಾ ಸಮಿತಿ ಸಹಯೋಗದಲ್ಲಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಉಚಿತ ಗ್ರಾಮೀಣ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಾನವನಿಗೆ ಆರೋಗ್ಯವೇ ಮಹಾಭಾಗ್ಯ. ಆರೋಗ್ಯ ಸರಿ ಇಲ್ಲದಿದ್ದರೆ ಆಸ್ತಿ, ಅಂತಸ್ತು, ಐಶ್ವರ್ಯ ಎಲ್ಲವೂ ವ್ಯರ್ಥ. ಉತ್ತಮ ರೀತಿಯ ಆಹಾರ ಪದ್ಧತಿ ವ್ಯಾಯಾಮ ಅಳವಡಿಸಿಕೊಂಡಲ್ಲಿ ಆರೋಗ್ಯಕರ ಜೀವನ ನಡೆಸಬಹುದಾಗಿದೆ. ಪ್ರತಿನಿತ್ಯದ ಕೆಲಸ ಕಾರ್ಯಗಳ ಒತ್ತಡದ ನಡುವೆ ಆರೋಗ್ಯಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಹಲವು ರೀತಿಯ ದುಶ್ಚಟಗಳಿಗೆ ದಾಸರಾಗಿ ತಮ್ಮ ಉಜ್ವಲ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಾರೆ. ವೈದ್ಯಕೀಯ ಚಿಕಿತ್ಸೆ ಪಡೆದುಕೊಂಡರೆ ಆರೋಗ್ಯಕರ ಜೀವನ ನಡೆ ಸಲು ಸಾಧ್ಯ ಎಂದ ಅವರು ವ್ಯಸನಗಳ ಚಟಕ್ಕೆ ದಾಸರಾಗದೇ ಸಾತ್ವಿಕ ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ಮುಗುಳುವಳ್ಳಿ ಗ್ರಾಪಂ ಅಧ್ಯಕ್ಷೆ ಶೃತಿ ಉಮೇಶ್ ಮಾತನಾಡಿ, ಆರೋಗ್ಯದಲ್ಲಿ ಏರುಪೇರುಗಳು ಕಂಡು ಬಂದಲ್ಲಿ ನಿರ್ಲಕ್ಷö್ಯ ವಹಿಸಿದೇ ಶೀಘ್ರವೇ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಯಾವುದೇ ರೀತಿಯ ಖಾಯಿಲೆಗಳಿದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ರೋಟರಿ ಕಾಫಿಲ್ಯಾಂಡ್ ಕಾರ್ಯದರ್ಶಿ ಎಂ.ಆನAದ್, ರೋಟರಾಕ್ಟ್ ಸಲಹೆಗಾರ ರವೀಂದ್ರನಾಥ ನಾಯ್ಡು, ಅಧ್ಯಕ್ಷ ಗೌರವ್.ಎಂ.ಸಿAಹ, ಕಾರ್ಯದರ್ಶಿ ವಿ.ಸುಪ್ರಿತ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಲ್ಲೇಶ್, ಸದಸ್ಯರಾದ ಉಮೇಶ್, ಮಾಜಿ ಸದಸ್ಯರಾದ ವಿಜಯಕುಮಾರ್, ಬ್ಯಾಂಕ್ ನಿರ್ದೇಶಕ ಪರಮೇಶಪ್ಪ, ದಿನೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net