ಚಾಮರಾಜನಗರ: ಕೊಳ್ಳೇಗಾಲದ ರಸ್ತೆಯಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ವೃದ್ಧೆಯನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಮಂಗಳವಾರ ದೊಡ್ಡಿಂದುವಾಡಿ ಸಮೀಪ ಶಾಸಕ ಸಿ.ಪುಟ್ಟರಂಗಶೆಟ್ಟಿ ಬರುತ್ತಿದ್ದ ವೇಳೆ ವೃದ್ಧೆಯೊಬ್ಬರು ಬೈಕ್‌ನಿಂದ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿತ್ತು. ತಕ್ಷಣ ಇವರನ್ನು ತಮ್ಮ ಕಾರಿನಲ್ಲಿ ಕೊಳ್ಳೇಗಾಲದ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದರು. ಶಾಸಕರ ಈ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.