ಮಾನಸ ಶಿಕ್ಷಣ ಸಂಸ್ಥೆಯಲ್ಲಿ ಶ್ರದ್ಧಾಂಜಲಿ ಸಲ್ಲಿಕೆ

27-kollegal-1,,,,,
Published on

ಕೊಳ್ಳೇಗಾಲ: ಮಾಜಿ ಪ್ರಧಾನಿ, ಶ್ರೇಷ್ಠ ಆರ್ಥಿಕ ತಜ್ಞ, ಪದ್ಮವಿಭೂಷಣ ಡಾ.ಮನಮೋಹನ್ ಸಿಂಗ್ ಅವರಿಗೆ ಪಟ್ಟಣದ ಮಾನಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಭೆಯಲ್ಲಿ ಮಾನಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ನಾಗರಾಜು, ಕಾರ್ಯದರ್ಶಿ ಎಸ್.ದತ್ತೇಶ್‌ಕುಮಾರ್, ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಕೊಳ್ಳೇಗಾಲ ಟೌನ್ ಒಕ್ಕಲಿಗರ ಸಂಘದ ಅಧ್ಯಕ್ಷ ಶೇಖರ್, ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ನಟರಾಜ ಮಾಳಿಗೆ, ಮುಖಂಡ ರಾಚಪ್ಪಾಜಿ ಶ್ರದ್ಧಾಂಜಲಿ ಸಲ್ಲಿಸಿದರು.

ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ದತ್ತೇಶ್ ಕುಮಾರ್ ಮಾತನಾಡಿ, ದೇಶ ಕಂಡ ಧೀಮಂತ ನಾಯಕ, ಆರ್ಥಿಕ ಚಿಕಿತ್ಸಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನ ನೋವಿನ ಸಂಗತಿ. ಅವರು ಪ್ರಧಾನಿಯಾಗಿದ್ದ ಸಂದರ್ಭ ದೇಶದ ಆರ್ಥಿಕತೆ ವವಸ್ಥೆಗೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net