ಮಾನಸಗಂಗೋತ್ರಿಯಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ಬ್ಯಾನರ್ ತೆರವು : ವಿದ್ಯಾರ್ಥಿಗಳಿಂದ ಪ್ರತಿಭಟನೆ

Removal of banner with Ambedkar portrait in Manasagangothri Students protest
Published on

ಮೈಸೂರು: ಮಾನಸಗಂಗೋತ್ರಿಯ ಕ್ಲಾಕ್ ಟವರ್ ಸಮೀಪದ ಫಲಕದಲ್ಲಿ ಅಳವಡಿಸಿದ್ದ ಅಂಬೇಡ್ಕರ್ ಭಾವಚಿತ್ರವಿದ್ದ ಬ್ಯಾನರ್ ತೆರವುಗೊಳಿಸಿ ದ್ದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಗುರುವಾರ ಎರಡನೇ ದಿನ ಪೂರೈಸಿದ್ದು, ಪ್ರತಿಭಟನೆಗೆ ಮಣಿದ ಮೈಸೂರು ವಿಶ್ವವಿದ್ಯಾಲಯ ಇಬ್ಬರು ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸಿದೆ.

ಬ್ಯಾನರ್ ತೆರವುಗೊಳಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸುವವರೆಗೂ ಪ್ರತಿಭಟನೆ ಮುಂದುವರೆಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು. ಗುರುವಾರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮದ ಭರವಸೆ ನೀಡಿದರು.

ಮಾನಸಗಂಗೋತ್ರಿಂು ಕ್ಲಾಕ್ ಟವರ್ ಬಳಿ ಒಟ್ಟುಗೂಡಿದ ವಿದ್ಯಾರ್ಥಿಗಳು ಬ್ಯಾನರ್ ತೆರವುಗೊಳಿಸಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾಲಂುದ ಆಡಳಿತ ವರ್ಗದ ವಿರುದ್ಧ ಧಿಕ್ಕಾರ ಕೂಗಿದರು. ಅಂಬೇಡ್ಕರ್ ಭಾವಚಿತ್ರವುಳ್ಳ ಬ್ಯಾನರ್‌ಅನ್ನು ದುರುದ್ದೇಶ ಪೂರ್ವಕವಾಗಿ ತೆರವುಗೊಳಿಸಲಾಗಿದೆ. ವಿವಿಧೆಡೆ ಇದೇ ರೀತಿ ಅಂಬೇಡ್ಕರ್‌ಗೆ ನಿರಂತರವಾಗಿ ಅವಮಾನ ಮಾಡುವ ಕಾರ್ಯ ನಡೆಯುತ್ತಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದರು. ವಿದ್ಯಾರ್ಥಿಗಳು ಕ್ಲಾಕ್ ಟವರ್ ಕಡೆಗೆ ತೆರಳುವ ಮಾರ್ಗವನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ಎಸ್.ಟಿ.ರಾಮಚಂದ್ರ ಹಾಗೂ ವಿಶೇಷಾಧಿಕಾರಿ ಕುವಾರ್ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದ್ದು, ಅವರನ್ನು ಮಾತೃ ಇಲಾಖೆಗೆ ಕಳುಹಿಸಲಾಗಿದೆ.

ದೂರು ದಾಖಲು: ಬ್ಯಾನರ್ ತೆರವುಗೊಳಿಸಿ ಆಡಳಿತಾಧಿಕಾರಿ ಎಸ್.ಟಿ.ರಾಮಚಂದ್ರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಸಂಘಟಕರು ಜಂುಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ಅಧ್ಯಕ್ಷ ಶಿವಶಂಕರ್, ಉಪಾಧ್ಯಕ್ಷ ಮಹೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಹಿನ್ನೆಲೆಯಲ್ಲಿ ಮಾನಸಗಂಗೋತ್ರಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net