ಮಾನಸಗಲ್ ಐತಿಹಾಸಿಕ ಶ್ರೀ ಲಕ್ಷ್ಮೀರಂಗನಾಥ ರಥೋತ್ಸವ ಅದ್ದೂರಿ

jatre
ದೇವದುರ್ಗ ತಾಲೂಕು ಮಾನಸಗಲ್ ಗ್ರಾಮದಲ್ಲಿ ಐತಿಹಾಸಿಕ ಶ್ರೀ ಲಕ್ಷ್ಮೀರಂಗನಾಥ ರಥೋತ್ಸವ ಶುಕ್ರವಾರ ಅದ್ದೂರಿಯಾಗಿ ನಡೆಯಿತು.
Published on

ದೇವದುರ್ಗ: ತಾಲೂಕಿನ ಮಾನಸಗಲ್ ಗ್ರಾಮದಲ್ಲಿ ಐತಿಹಾಸಿಕ ಶ್ರೀ ಲಕ್ಷ್ಮೀರಂಗನಾಥ ಜಾತ್ರೆ ನಿಮಿತ್ತ ಶುಕ್ರವಾರ ಮಹಾರಥೋತ್ಸವ ಅದ್ದೂರಿಯಾಗಿ ನಡೆಯಿತು.


ಐದು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗುರುವಾರ ಸಂಜೆ ಉಚ್ಛಾಯ ಮಹೋತ್ಸವ, ಶುಕ್ರವಾರ ಬೆಳಗ್ಗೆ ಶ್ರೀ ಲಕ್ಷ್ಮೀರಂಗನಾಥ ದೇವರಿಗೆ ಅಭಿಷೇಕ, ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ತೆಂಗಿನತೋರಣ, ಬಾಳೆದಿಂಡು, ಮಾವಿನ ತೋರಣ ಕಟ್ಟಿ, ಹೂವಿನಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.

ಮೂರ್ತಿಗೆ ಚಿನ್ನ ಚಿನ್ನ, ಹೂವುಗಳಿಂದ ಅಲಂಕಾರ

ಶ್ರೀ ಲಕ್ಷ್ಮೀರಂಗನಾಥ ಸ್ವಾಮಿ ಮೂರ್ತಿಗೆ ಬೆಳ್ಳಿ, ಚಿನ್ನ, ಹೂವುಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ನಂತರ ಲಕ್ಷಾಂತರ ಭಕ್ತರ ಮಧ್ಯೆ ಅದ್ದೂರಿಯಾಗಿ ರಥೋತ್ಸವ ಜರುಗಿತು.ಭಕ್ತರು ಹೂವು, ಉತ್ತತ್ತಿ, ಬಾಲೇಹಣ್ಣು ತೂರಿ ಭಕ್ತಿ ಸಮರ್ಪಿಸಿದರು. ಜಾತ್ರೆಯಲ್ಲಿ ಆಂಧ್ರಪ್ರದೇಶ, ತೆಲಂಗಾಣದ ಭಕ್ತರು ಭಾಗವಹಿಸಿದ್ದರು. ಭಾನುವಾರ ಜಾನುವಾರುಗಳ ಜಾತ್ರೆ ಜರುಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net