ಮಾನಸಿಕ ಆರೋಗ್ಯದ ಬಗ್ಗೆಯೂ ಕಾಳಜಿ ಅಗತ್ಯ

1 ckm 2
ಹೋಟೆಲ್ ಒಂದರಲ್ಲಿ ರೋಟರಿ ಕಾಫಿಲ್ಯಾಂಡ್ ವತಿಯಿಂದ ಆಯೋಜಿಸಲಾಗಿದ್ದ ಮಾನಸಿಕ ಆರೋಗ್ಯ ಮತ್ತು ಸ್ವಚ್ಛತೆ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಶಶಿಕಲ ಮಾತನಾಡಿದರು. ನಾಗೇಶ್ ಕೆಂಜಿಗೆ, ಡಾ.ಚೇತನ, ಎಂ.ಆನAದ್, ಡಾ.ಎಚ್.ಬಿ.ಚಂದ್ರಶೇಖರ್, ರವೀಂದ್ರ ನಾಥ ನಾಯ್ಡು, ಗುರುಮೂರ್ತಿ ಮತ್ತಿತರರಿದ್ದರು.
Published on

ಚಿಕ್ಕಮಗಳೂರು:

ಸಾರ್ವಜನಿಕರು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಶಶಿಕಲ ಸಲಹೆ ನೀಡಿದರು.

ನಗರದ ಹೋಟೆಲ್ ಒಂದರಲ್ಲಿ ರೋಟರಿ ಕಾಫಿಲ್ಯಾಂಡ್ ವತಿಯಿಂದ ಆಯೋಜಿಸಲಾಗಿದ್ದ ಮಾನಸಿಕ ಆರೋಗ್ಯ ಮತ್ತು ಸ್ವಚ್ಛತೆ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನಿಗೆ ದೈಹಿಕ ಆರೋಗ್ಯ ಎಷ್ಟು ಮುಖ್ಯವೋ ಮಾನಸಿಕ ಆರೋಗ್ಯವೂ ಅಷ್ಟೇ ಮುಖ್ಯ. ಮಾನಸಿಕ ಆರೋಗ್ಯದಲ್ಲಿ ಏರುಪೇರಾದರೆ ದೈಹಿಕ ಆರೋಗ್ಯ ಹದಗೆಡುವುದರ ಜೊತೆಗೆ ವ್ಯಕ್ತಿಯ ಅಧಃ ಪತನವಾಗುತ್ತದೆ ಎಂದರು.

ಮನುಷ್ಯ ಸಂಪೂರ್ಣ ಆರೋಗ್ಯವಂತನಾಗಿರಬೇಕಾದರೆ ಆತನ ಮಾನಸಿಕ ಸ್ಥಿತಿ ಉತ್ತಮವಾಗಿರಬೇಕು. ಮಾನಸಿಕವಾಗಿ ಸದೃಢನಾಗಿರಬೇಕು. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಮನಸ್ಸಿನ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಕಿವಿಮಾತು ಹೇಳಿದರು.

ತಾಲೂಕು ವೈದ್ಯಾಧಿಕಾರಿ ಡಾ.ಚೇತನ ಮಾತನಾಡಿ, ಸ್ವಚ್ಛ ಮತ್ತು ಸುಂದರವಾದ ಪರಿಸರ, ಉತ್ತಮ ಚಿಂತನೆ, ಉತ್ತಮ ಹವ್ಯಾಸಗಳು ಮಾನಸಿಕ ಆರೋಗ್ಯಕ್ಕೆ ಸಹಕಾರಿ. ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು. ಉತ್ತಮ ಚಿಂತನೆ ಮತ್ತು ಉತ್ತಮ ಹವ್ಯಾಸಗಳನ್ನು ರೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರೋಟರಿ ಕಾಫಿಲ್ಯಾಂಡ್ ಕಾರ್ಯದರ್ಶಿ ಎಂ. ಆನಂದ್ ಮಾತನಾಡಿ, ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾಗೂ ಪರಿಸರ ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ರೋಟರಿ ಕಾಫಿಲ್ಯಾಂಡ್ ಅಧ್ಯಕ್ಷ ನಾಗೇಶ್ ಕೆಂಜಿಗೆ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.

ಪ್ರಬಾರಿ ಜಿಲ್ಲಾ ಸರ್ಜನ್ ಡಾ.ಎಚ್.ಬಿ. ಚಂದ್ರಶೇಖರ್, ತಾಲೂಕು ವೈದ್ಯಾಧಿಕಾರಿ ಡಾ. ಚೇತನ ಹಾಗೂ ಮಾನಸಿಕ ಆರೋಗ್ಯ ತಜ್ಞ ಡಾ, ಚಂದ್ರಶೇಖರ್ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಉದ್ಯಮಿ ತ್ಯಾಗರಾಜ ಶೆಟ್ಟಿ, ರೋಟರಿ ಕಾಫಿಲ್ಯಾಂಡ್ ಪದಾಧಿಕಾರಿಗಳಾದ ರವೀಂದ್ರನಾಥ್ ನಾಯ್ಡು, ಗುರುಮೂರ್ತಿ, ನಾಸೀರ್ ಹುಸೇನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net