ಮಾನಸಿಕ ಒತ್ತಡ ನಿವಾರಿಸಿಕೊಳ್ಳಿ

Published on

ಬಳ್ಳಾರಿ : ಮಾನಸಿಕ ಒತ್ತಡಗಳನ್ನು ನಿಗ್ರಹಿಸಿಕೊಂಡು ವೃದ್ಧಾಪ್ಯ ವಯೋಮಾನದಲ್ಲಿ ಆರೋಗ್ಯ ಜೀವನ ರೂಪಿಸಿಕೊಳ್ಳಿ ಎಂದು ಹಿರಿಯ ಸಿವಿಲ್ ನ್ಯಾಯಧೀಶ ರಾಜೇಶ್ ಎನ್. ಹೊಸಮನೆ ಹೇಳಿದರು.
ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ, ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರ, ಜಿಲ್ಲಾಸ್ಪತ್ರೆ ಸಹಯೋಗದೊಂದಿಗೆ ಮಂಗಳವಾರ ನಡೆದ ಜಾಗತಿಕ ಆಲ್ಜೆಮರ್ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ದಿನಮಾನಗಳಲ್ಲಿ ಕೆಲಸದ ಒತ್ತಡದಿಂದ ಚಿಕ್ಕ ವಯಸ್ಸಿನ ಮಕ್ಕಳಿಂದ ಹಿಡಿದು ಯುವಕರು ಮತ್ತು ಹಿರಿಯರಲ್ಲಿ ಮರೆವು ಖಾಯಿಲೆ ಕಂಡು ಬರುತ್ತಿದ್ದು, ಯೋಗ, ಧ್ಯಾನ, ವ್ಯಾಯಾಮ, ಪ್ರಾಣಾಯಾಮಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ದೈನಂದಿನ ಚಟುವಟಿಕೆ ಆರಂಭಿಸಿ ಮೆದುಳಿಗೆ ಸಂಬಂಧಿಸಿದ ಖಾಯಿಲೆಗಳಿಂದ ಮುಕ್ತರಾಗಬೇಕು ಎಂದು ತಿಳಿಸಿದರು.
ಡಿಎಚ್‌ಒ ಡಾ. ವೈ. ರಮೇಶ ಬಾಬು ಮಾತನಾಡಿ, ಯುವಕರು ಹಾಗೂ ಜನಸಾಮಾನ್ಯರು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಸುಸ್ಥಿರ ಆರೋಗ್ಯ ಜೀವನ ಸಾಗಿಸಲು ಯೋಗ, ಧ್ಯಾನ, ಕಪಿಲಭಾತಿ ಪ್ರಾಣಾಯಮ ರೂಢಿಸಿಕೊಳ್ಳಬೇಕು ಎಂದರು.
ಜಿಲ್ಲಾ ಶಸ್ತ ಚಿಕಿತ್ಸಕ ಡಾ. ಎನ್. ಬಸರೆಡ್ಡಿ , ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಕೆ. ಜಿ. ವೀರೇಂದ್ರ ಕುಮಾರ್ ಮಾತನಾಡಿದರು.
ಪ್ರಶಸ್ತಿ ವಿತರಣೆ: ಜಾಗತಿಕ ಅಲ್ಜೆಮರ್ ದಿನದ ಅಂಗವಾಗಿ ಆಯೋಜಿಸಿದ್ದ ಮೆದುಳು ಚುರುಕುಗೊಳಿಸುವ ಸ್ಪರ್ಧೆಗಳಲ್ಲಿ ವಿಜೇತರಾದ ಜಿಲ್ಲಾಸ್ಪತ್ರೆಯ ಸಿಬ್ಬಂದಿಗೆ ಬಹುಮಾನ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net