ಮಾನಸಿಕ ಖಿನ್ನತೆ : ಟೆಕ್ಕಿ ನೇಣು ಬಿಗಿದು ಆತ್ಮಹತ್ಯೆ

crime
Published on

ಮೈಸೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಟೆಕ್ಕಿಯೊಬ್ಬರು ರೂಪಾನಗರದಲ್ಲಿ ಬುಧವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೂಪಾನಗರದ ನಿವಾಸಿ ಪ್ರತಾಪ್ (38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರತಾಪ್ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ವರ್ಕ್ ಫ್ರಮ್ ಹೋಮ್‌ನಲ್ಲಿ ಮೈಸೂರಿನ ರೂಪಾನಗರದಲ್ಲಿ ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದರು.

ಪ್ರತಾಪ್ ಅವರಿಗೆ ವಿವಾಹವಾಗಿರಲಿಲ್ಲ. ಇದರಿಂದಾಗಿ ಮಾನಸಿಕ ಖಿನ್ನತೆ ಅವರು ಒಳಗಾಗಿದ್ದು ಎನ್ನಲಾಗಿದೆ. ಬುಧವಾರ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net