ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರೀಡೆ ಪ್ರೇರಕ ಶಕ್ತಿ

22 kgl photo 1
ಕೊಳ್ಳೇಗಾಲ ಪಟ್ಟಣದಲ್ಲಿರುವ ಶ್ರೀ ಮಹದೇಶ್ವರ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಶಾಸಕ ಎನ್.ಮಹೇಶ್ ಉದ್ಘಾಟಿಸಿದರು.
Published on

ಕೊಳ್ಳೇಗಾಲ: ಕ್ರೀಡೆ ಮಕ್ಕಳ ಮಾನಸಿಕ, ದೈಹಿಕ ಬೆಳವಣಿಗೆಗೆ ಪ್ರೇರಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಶಾಸಕ ಎನ್.ಮಹೇಶ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಪಟ್ಟಣದ ಶ್ರೀ ಮಹದೇಶ್ವರ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 2022-23 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೋವಿಡ್‌ನಿಂದಾಗಿ ಮೂರು ವರ್ಷಗಳಿಂದ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಸರ್ಕಾರ ದಸರಾವನ್ನು ವಿಜೃಂಭಣೆಯಿಂದ ಮಾಡುವುದರ ಜತೆಗೆ ದಸರಾ ಕ್ರೀಡಾಕೂಟವನ್ನು ನಡೆಸಲು ತೀರ್ಮಾನಿಸಿದೆ ಎಂದರು.
ನಗರಸಭೆ ಅಧ್ಯಕ್ಷೆ ಸುಶೀಲಾ ಮಾತನಾಡಿ, ಕ್ರೀಡೆ ಆರೋಗ್ಯಕರ ಜೀವನ ನಡೆಸಲು ಸಹಕಾರಿಯಾಗಿದೆ. ಆದ್ದರಿಂದ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ನೀಡಬೇಕು ಎಂದರು.
ನಗರಸಭೆ ಸದಸ್ಯೆ ಸುಮಾ ಸುಬ್ಬಣ್ಣ, ಉಪನಿರೀಕ್ಷಕಿ ಉಮಾವತಿ, ದೈಹಿಕ ಪರಿವೀಕ್ಷಕ ಸ್ಟೀವನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿ ವ್ಯವಸಸ್ಥಾಪಕ ರಂಗಸ್ವಾಮಿ ಹಾಗೂ ವಿವಿಧ ಶಾಲಾ-ಕಾಲೇಜಿನ ದೈಹಿಕ ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net