ಮಾನಸಿಕ ವೃದ್ಧಿಗೆ ಕ್ರೀಡೆ ಸಹಕಾರಿ

21rajesh5
Published on

ಚಾಮರಾಜನಗರ: ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ವೃದ್ಧಿಗೆ ಕ್ರೀಡೆ ಅತ್ಯಂತ ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ ಹರವೆ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಒಂದು ಮಗು ಪರಿಪೂರ್ಣ ಶಿಕ್ಷಣ ಪಡೆಯಲು, ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳಲು ತರಗತಿಯಲ್ಲಿ ಕಲಿಯುವ ಪಾಠಪ್ರವಚನಗಳ ತೆಯಲ್ಲಿ ಕ್ರೀಡೆ, ಕಲೆ, ಸಾಹಿತ್ಯ ನಾಟಕ, ಅಭಿನಯ ಮುಂತಾದ ಪಠ್ಯೇತರ ಚಟುವಟಿಕೆಗಳು ಸಹಕಾರಿಯಾಗಿದೆ.ಮಕ್ಕಳಲ್ಲಿ ಅಡಗಿರುವ ಕ್ರೀಡಾ ಮನೋಭಾವನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಇದು ವೇದಿಕೆಯಾಗಿದೆ. ವಿದ್ಯಾರ್ಥಿಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ನಿರ್ದೇಶಕ ಸಿದ್ದಲಿಂಗಮೂರ್ತಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಆರ್.ಶಂಕರ್, ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ಬಸವರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರತ್ ಭೂಷಣ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಅಧ್ಯಕ್ಷ ಚಿಕ್ಕಬಸವಯ್ಯ, ಉಪಾಧ್ಯಕ್ಷೆ ಶಶಿಕಲಾ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net