ಮಾಯಮುಡಿ ಶಾಲೆಗೆ ನೀರು ಶುದ್ಧೀಕರಣ ಯಂತ್ರ ಕೊಡುಗೆ

11 gkp 01
ಜೆಸಿಐ ಸಪ್ತಾಹದ ಅಂಗವಾಗಿ ಮಾಯಮುಡಿ ಸರ್ಕಾರಿ ಶಾಲೆಗೆ ನೀರು ಶುದ್ಧೀಕರಣ ಯಂತ್ರವನ್ನು ಅಳವಡಿಸಲಾಯಿತು. ಜೆಸಿಐ ನಿಸರ್ಗ ಪೊನ್ನಂಪೇಟೆ ಅದ್ಯಕ್ಷ ನೀತ್ ಅಯ್ಯಪ್ಪ, ಗ್ರಾ.ಪಂ ಅಧ್ಯಕ್ಷ ಟಾಟು ಮೊಣ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.
Published on

ಗೋಣಿಕೊಪ್ಪ: ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಜೆಸಿಐ ಸಪ್ತಾಹ 2023ನೇ ಸಾಲಿನ ಎರಡನೇ ದಿನದ ಕಾರ್ಯಕ್ರಮದಲ್ಲಿ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ನೀತ್ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಮಾಯಮುಡಿ ಸರ್ಕಾರಿ ಶಾಲೆಗೆ ನೀರು ಶುದ್ಧೀಕರಣ ಯಂತ್ರವನ್ನು ಅಳವಡಿಸಲಾಯಿತು.

ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಎಸ್.ಟಾಟು ಮೊಣ್ಣಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಶುದ್ಧ ನೀರಿನ ಕೊರತೆಯಿಂದ ಅನಾರೋಗ್ಯ ಹೆಚ್ಚಾಗುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ ಶುದ್ಧ ನೀರು ದೊರೆಯಬೇಕು ಎನ್ನುವ ಉದ್ದೇಶದಿಂದ ಶಾಶ್ವತ ಪರಿಹಾರವಾಗಿ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ಕುಡಿಯುವ ನೀರಿನ ಯಂತ್ರವನ್ನು ಅಳವಡಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಘಟಕದ ನಿಕಟ ಪೂರ್ವ ಅಧ್ಯಕ್ಷ ದಿನೇಶ್ ಎ.ಪಿ, ನಿಕಟ ಪೂರ್ವ ಕಾರ್ಯದರ್ಶಿ ಚೆಟ್ಟೋಳಿರ ಶರತ್ ಸೋಮಣ್ಣ, ಸದಸ್ಯರಾದ ತಿಮ್ಮಯ್ಯ, ಮುಖ್ಯಶಿಕ್ಷಕಿ ರಾಗಿಣಿ ಡಿ.ಯು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್, ಸದಸ್ಯರಾದ ಸಲಾಂ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net