ಮಾಯಮುಡಿಯಲ್ಲಿ ಗಾಂಜಾ ಬೆಳೆದಿದ್ದವನ ಬಂಧನ

Published on

ಗೋಣಿಕೊಪ್ಪ: ಮನೆಯ ಆವರಣದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದಾರೆ.


ಮಾಯಮುಡಿ ಗ್ರಾಮದ ದಾಸ ಕಾಲನಿ ನಿವಾಸಿ ಸುಜಯ್ (29) ಬಂಧಿತ. ತನ್ನ ಮನೆಯ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು 49 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.


ವಿರಾಜಪೇಟೆ ಉಪ ವಿಭಾಗ ಡಿವೈಎಸ್‌ಪಿ ಆರ್.ಮೋಹನ್‌ಕುಮಾರ್, ಗೋಣಿಕೊಪ್ಪ ವೃತ್ತ ಸಿಪಿಐ ಗೋವಿಂದರಾಜು, ಪಿಎಸ್‌ಐ ಕೆ.ಪಿ.ದೀಕ್ಷಿತ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net