ಮಾರಲಭಾವಿಯಲ್ಲಿ ಕಾಣಿಸಿಕೊಂಡ ವಾತಿ-ಭೇದಿ

25ydg03
Published on

ಯಾದಗಿರಿ: ಇತ್ತೀಚೆಗೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದಲ್ಲಿ ವ್ಯತ್ಯಾಸವಾಗುತ್ತಿರುವ ಪ್ರಕರಣ ಹೆಚ್ಚಾಗಿರುವ ಮಧ್ಯಯೇ ತಾಲೂಕಿನ ಮಾರಲಭಾವಿ ಗ್ರಾಮದಲ್ಲಿ ವಾಂತಿ-ಭೇದಿಯಿಂದ ಜನತೆ ತೀವೃ ಅಸ್ವಸ್ಥಗೊಂಡ ಘಟನೆ ಶುಕ್ರವಾರ ನಡೆದಿದೆ.

ಗ್ರಾಮದಲ್ಲಿ ಕಳೆದೆರಡು ದಿನದಿಂದ ಜನರಲ್ಲಿ ವಾಂತಿ-ಭೇದಿ ಹೆಚ್ಚಾಗಿದೆ. ಭಾವಿಯಲ್ಲಿನ ನೀರು ಕಲುಷಿತಗೊಂಡಿದ್ದು ಅದನ್ನು ಸೇವಿಸಿದ ಮಹಿಳೆ ತಿಪ್ಪವ್ವ ಕುಚಬಾಳ (50)ಆನಾರೋಗ್ಯಕ್ಕೀಡಾಗಿ ಹುಣಸಗಿ ಸಕರ್ಾರಿ ಆಸ್ಪತ್ರೆಗೆ ದಾಖಲಾಗಿದ್ದಳು. ಹೆಚ್ಚಿನ ಚಿಕಿತ್ಸೆಗೆ ತಾಳಿಕೋಟಿ ಪಟ್ಟಣಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಸಾವಿಗೀಡಾಗಿದ್ದಾಳೆ.

ಅಲ್ಲದೆ, ಪುಟ್ಟಣ ಮಕ್ಕಳು ಸೇರಿ 10 ಜನ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದು, ಹುಣಸಗಿ ಮತ್ತು ತಾಳಿಕೋಟಿ ಪಟ್ಟಣದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಘಟನೆಗೆ ಕಲುಷಿತಗೊಂಡ ಕುಡಿಯುವ ನೀರು ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇಷ್ಟೆಲ್ಲ ಅನಾಹುತವಾದ ಮೇಲೆ ಎಚ್ಚೆತ್ತುಕೊಂಡ ಪಂಚಾಯಿತಿ ಅಕಾರಿಗಳು ಗ್ರಾಮದ ಭಾವಿಯ ನೀರನ್ನು ಯಾರೂ ಸೇವಿಸಬೇಡಿ ಎಂದು ಧ್ವನಿವರ್ಧಕದ ಮೂಲಕ ತಿಳಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಗ್ರಾಪಂ ಮಾಜಿ ಸದಸ್ಯ ಸಾಯಬಣ್ಣ ಹೊಸಮನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ತಿಳಿದ ತಕ್ಷಣ ಗ್ರಾಮಕ್ಕೆ ಭೇಟಿ ನೀಡಿದ ಯಾದಗಿರಿ ಜಿಪಂ ಸಿಇಒ ಗರೀಮಾ ಪನ್ವಾರ, ಸಧ್ಯ ಎಲ್ಲರೂ ಆರೋಗ್ಯವಾಗಿದ್ದು ಯಾರೂ ಆತಂಕ ಪಡುವ ಅಗತ್ಯವಿಲ್ಲ. ಘಟನೆಯ ಬಗ್ಗೆ ಸಮಗ್ರ ವರದಿ ತರಿಸಿಕೊಳ್ಳಲಾಗುವುದು. ಆರೋಗ್ಯ ಇಲಾಖೆ ಸಿಬ್ಬಂದಿ 200 ಜನರ ಆರೋಗ್ಯ ತಪಾಸಣೆ ಮಾಡಿದ್ದಾರೆ. ಗ್ರಾಮದ ಭಾವಿಯನ್ನು ಸ್ವಚ್ಛಗೊಳಿಸಿದ ನಂತರ ಕುಡಿಯಲು ಯೋಗ್ಯವಿದ್ದರೆ ಮಾತ್ರ ಉಪಯೋಗಿಸಲು ಅವಕಾಶ ಕಲ್ಪಿಸಲಾಗುವುದು. ಇಲ್ಲದಿದ್ದರೆ ಪಯರ್ಾಯ ವ್ಯವಸ್ಥೆ ಮಾಡುತ್ತೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net