ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲನೆಯಾಗಲಿ

dc nitesh
Published on

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಚಿಸಲಾಗಿರುವ ತಂಡಗಳು ಚುರುಕಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ನಿಯೋಜಿಸಲಾಗಿರುವ ತಂಡಗಳು ಪ್ರತಿಯೊಂದು ವಾಹನಗಳ ಮೇಲೆ ನಿಗಾವಹಿಸಬೇಕು.

ಪ್ರತಿಯೊಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸದ್ಯಕ್ಕೆ ಒಂದು ತಂಡ ದಿನದ 24 ಗಂಟೆ ಕಾರ್ಯನಿರ್ವಹಿಸಬೇಕು. ಗೋದಾಮು, ಕಾರ್ಖಾನೆ, ಭವನಗಳು, ಮನೆಗಳಲ್ಲಿ ಅಕ್ರಮ ದಾಸ್ತಾನು ಕಂಡುಬಂದರೆ ಸಂಬಂಧಿಸಿದ ಇಲಾಖೆಯ ತಂಡಗಳು ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು. ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗಳು, ಮಸ್ಟರಿಂಗ್, ಡಿಮಸ್ಟರಿಂಗ್ ಕೇಂದ್ರಗಳು, ಚೆಕ್ ಪೋಸ್ಟ್ ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು.

ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ರೀತಿ ಲೋಪದೋಷ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು. ಮಹಾನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಜಿಪಂ ಸಿಇಒ ಹರ್ಷಲ್ ಭೋಯರ್, ಎಸ್‌ಪಿ ಡಾ.ಸಂಜೀವ ಪಾಟೀಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಭಾನು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net