ಮಾರ್ಚ 16 ರಾಷ್ಟ್ರೀಯ ಲೋಕ್ ಅದಾಲತ್

13-4
Published on

ಬಾಗಲಕೋಟೆ: ಜಿಲ್ಲೆಯಾದ್ಯಂತ ಎಲ್ಲ ಅಧೀನ ನ್ಯಾಯಾಲಯ ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ 16 ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಲೋಕ ಅದಾಲತ್‍ನಲ್ಲಿ ನ್ಯಾಯಾಲದಲ್ಲಿ ಬಾಕಿ ಇರುವ ಕಾನೂನಿನ ಅನ್ವಯ ರಾಜೀ ಆಗಬಹುದಾದ ಕ್ರೀಮಿನಲ್, ಎಂ.ಎಂ.ಆರ್.ಡಿ, ಚೆಕ್ ಬೌನ್ಸ್, ಮೋಟಾರು ವಾಹನ ಅಪಘಾತ ಪರಿಹಾರ ಕೋರಿರುವ ಪ್ರಕರಣಗಳು, ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ದ ದಾಖಲಾದ ಪ್ರಕರಣ, ಬ್ಯಾಂಕ್‍ಗಳಿಗೆ ಸಂಬಂಧಿಸಿದ ಪ್ರಕರಣ, ವೈವಾಹಿಕ ಅಥವಾ ಜೀವನಾಂಶ, ಆಸ್ತಿಯಲ್ಲಿ ವಿಭಾಗ ಕೋರಿರುವ ದಾವೆಗಳು, ಇತರೆ ಸಿವ್ಹಿಲ್ ವ್ಯಾಜ್ಯಗಳು ಹಾಗೂ ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಬ್ಯಾಂಕ್, ನೀರು ಮತ್ತು ವಿದ್ಯುತ್‍ಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶವಿರುತ್ತದೆ.

ವಕೀಲರು, ಸಾರ್ವಜನಿಕರು ಹಾಗೂ ಕಕ್ಷಿದಾರರು ರಾಷ್ಟ್ರೀಯ ಲೋಕ ಅದಾಲತ್‍ನ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎನ್.ವಿ.ವಿಜಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net