ಮಾರ್ಚ ಮೊದಲ ವಾರ ಕೈ ಅಭ್ಯರ್ಥಿಗಳ ಘೋಷಣೆ

Saleem_Ahmed_ji
ಸಲೀಂ ಅಹ್ಮದ
Published on

ಬಾಗಲಕೋಟೆ: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ ತಿಂಗಳ ಮೊದಲ ವಾರದಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ ಹೇಳಿದರು.
ನಗರದ ಹೆಲಿಪ್ಯಾಡ್‌ನಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಈಗಾಗಲೇ ಆಯ್ಕೆ ಪ್ರಕ್ರಿಯೆ ಕೊನೆ ಹಂತದಲ್ಲಿ ಇದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ೧೫೦ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ. ಈಗಾಗಲೇ ಸ್ಕ್ರೀನಿಂಗ್ ಕಮಿಟಿ ಮೊದಲ ಸುತ್ತು ಮುಕ್ತಾಯವಾಗಿದೆ. ಶಾರ್ಟ ಲಿಸ್ಟ್ ಮಾಡಿ ಕೊಟ್ಟಿದ್ದೇವೆ. ಇನ್ನೊಂದು ಸಭೆ ಆಗುತ್ತದೆ. ಬಳಿಕ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ನಡೆದು ಅಭ್ಯರ್ಥಿ ತೀರ್ಮಾನ ಆಗುತ್ತದೆ. ಮಾರ್ಚ ಮೊದಲ ವಾರ ಪಟ್ಟಿ ಪ್ರಕಟವಾಗುತ್ತದೆ ಎಂದರು
ಇದೇ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೆವಾಲಾ ಅವರು, ಬಹಳ ಬೇಗ ಅಭ್ಯರ್ಥಿಗಳ ಘೋಷಣೆ ಆಗುತ್ತದೆ. ಆದರೆ, ಆ ಬಗ್ಗೆ ನಾನು ಏನನ್ನೂ ಹೇಳಲ್ಲ. ಕೆಪಿಸಿಸಿ ಅಧ್ಯಕ್ಷರು, ಸಿಎಲ್ ಪಿ ನಾಯಕರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಇದ್ದು ಅವರನ್ನು ಕೇಳಿ. ಅವರೆಲ್ಲರೂ ಸೇರಿಕೊಂಡು ಟಿಕೆಟ್ ಫೈನಲ್ ಮಾಡುತ್ತಾರೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net