ಮಾರ್ಚ್ 1ರಿಂದ ಜಿಲ್ಲಾ ಮಟ್ಟದ ಸರಸ್ ಮೇಳ

CTD 13 ceo S J SOMASHEKER---0004
Published on

ಚಿತ್ರದುರ್ಗ:ಕೌಶಲಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ - ಸಂಜೀವಿನಿ ಹಾಗೂ ಜಿಪಂದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸ್ವ ಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸಿರುವ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕಾಗಿ ಮಾರ್ಚ್ 1ರಿಂದ ಎರಡು ದಿನಗಳ ಕಾಲ ನಗರದ ವಾಸವಿ ಮಹಲ್‌ನಲ್ಲಿ ಜಿಲ್ಲಾ ಮಟ್ಟದ ಸರಸ್ ಮೇಳ ಆಯೋಜಿಸಲಾಗಿದೆ.
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಘನ ಉಪಸ್ಥಿತಿವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮೇಳ ಉದ್ಘಾಟಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ,ಆಹಾರ ಮತ್ತು ನಾಗರಿಕ ಸಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ,ರಾಜ್ಯವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್‌ಭಾಷಾ, ಶಾಸಕರು, ವಿಧಾನ ಪರಿಷತ್ ಸದಸ್ಯರು ಆಗಮಿಸುವರು ಎಂದು ಸಿಇಒ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net