ಮಾಲಂಬಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ

5ss1tapasane
Published on


ಶನಿವಾರಸಂತೆ: ಸಮೀಪದ ಮಾಲಂಬಿ ಗ್ರಾಮದ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.


ಕೊಡಗು ಜಿಲ್ಲಾ ಆಯುಷ್ ಇಲಾಖೆ ಮತ್ತು ಸೋಮವಾರಪೇಟೆ ತಾಲೂಕು ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯುಷ್ ಇಲಾಖೆಯ ಸೇವಾ ಗ್ರಾಮ ಕಾರ್ಯಕ್ರಮದಡಿ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಸೋಮವಾರಪೇಟೆ ಸರ್ಕಾರಿ ಆಯುಷ್ ಆಸ್ಪತ್ರೆಯ ಆಯುರ್ವೇದ ತ್ಜಜ್ಞೆ ಡಾ.ಕೆ.ಎಸ್. ಶ್ವೇತಾ ಮಾತನಾಡಿ, ಜನರ ಆರೋಗ್ಯದ ದೃಷ್ಟಿಯಿಂದ ಆಯುಷ್ ಇಲಾಖೆಯು ಸೇವಾ ಗ್ರಾಮ ಕಾರ್ಯಕ್ರಮದ ಮೂಲಕ ಆಯುರ್ವೇದ ಪದ್ಧತಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳುತ್ತಿರುವ ಜತೆಗೆ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಉಚಿತವಾಗಿ ಆಯುರ್ವೇದ ಔಷಧ, ಮಾತ್ರೆಗಳನ್ನು ಒಳಗೊಂಡ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.


ಡಾ.ಕೆ.ಎಸ್.ಶ್ವೇತಾ ಮತ್ತು ಸೋಮವಾರಪೇಟೆ ಆಯುಷ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಪಿ.ಜಿ.ಅರಣ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net