ಮಾಲಂಬಿಯಲ್ಲಿ ಗೌರಿ-ಗಣೇಶ ಪ್ರತಿಷ್ಠಾಪನೆ

28ss1gouri ganesa pratistapane
Published on

ಶನಿವಾರಸಂತೆ: ಗೌರಿ- ಗಣೇಶ ಹಬ್ಬದ ಪ್ರಯುಕ್ತ ಸಮೀಪದ ಮಾಲಂಬಿ ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿಯಿಂದ 20ನೇ ವರ್ಷದ ಅದ್ದೂರಿ ಗೌರಿ ಗಣೇಶೋತ್ಸವವನ್ನು ಆಚರಿಸಲಾಯಿತು.

ಮಂಗಳವಾರ ಗೌರಿ ಹಬ್ಬದ ಅಂಗವಾಗಿ ಬೆಳಗ್ಗೆ ಸೇವಾ ಸಮಿತಿಯವರು, ಮಹಿಳೆಯರು, ಮಕ್ಕಳು ಗೌರಿ ದೇವಿಯ ಮೂರ್ತಿಗೆ ಸಾಂಪ್ರದಾಯಿಕವಾಗಿ ಪೂಜಿಸಿದರು. ನಂತರ ಗೌರಿ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪನಾ ವೇದಿಕೆಗೆ ಮೆರವಣಿಗೆ ಮೂಲಕ ತಂದು ಭಕ್ತಿಭಾವದೊಂದಿಗೆ ಕೂರಿಸಿದರು.

ಅದೇ ರೀತಿಯಲ್ಲಿ ಬುಧವಾರ ಗಣೇಶ ಮೂರ್ತಿಯನ್ನು ಮೆರವಣಿಗೆ ಮೂಲಕ ಕರೆತಂದು ವೇದಿಕೆ ಮಂಟಪದಲ್ಲಿ ಕೂರಿಸಿದರು. ನಂತರ ಗೌರಿ ಮತ್ತು ಗಣೇಶನಿಗೆ ಅರ್ಚಕರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ಯುವಕರು, ಯುವತಿಯರು, ಮಹಿಳೆಯರು, ಮಕ್ಕಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net