ಮಾಲಿಂಗನತ್ತ ಗ್ರಾಮಕ್ಕೆ ನಿರಂತರ ವಿದ್ಯುತ್ ಸಂಪರ್ಕ

23 HANUR 2
23 ಹನೂರು 2 ಮಾಲಿಂಗನತ್ತ ಗ್ರಾಮಕ್ಕೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಲು ಕಾಮಗಾರಿಯನ್ನು ಕೈಗೊಳ್ಳಲಾಗಿರುವುದು.
Published on

ನೂರು: ಗ್ರಾಮಸ್ಥರ ಪ್ರತಿಭಟನೆಯಿಂದ ಎಚ್ಚೆತ್ತ ಸೆಸ್ಕ್ ಅಧಿಕಾರಿಗಳು ಮಂಗಳವಾರ ತಾಲೂಕಿನ ಮಾಲಿಂಗನತ್ತ ಗ್ರಾಮಕ್ಕೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ.


ಸರ್ಕಾರ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವ ಉದ್ಧೇಶದಿಂದ ನಿರಂತರ ಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ತಾಲೂಕಿನಲ್ಲಿ ಆಯ್ಕೆಯಾಗಿರುವ ಲೊಕ್ಕನಹಳ್ಳಿಯ ಹೋಬಳಿಯ ಎಲ್ಲ ಗ್ರಾಮಗಳಲ್ಲಿ ಈಗಾಗಲೇ ಕಾಮಗಾರಿಯನ್ನು ಪ್ರಾರಂಭಿಸಲಾಗಿತ್ತು. ಆದರೆ ಸೆಸ್ಕ್ ಅಧಿಕಾರಿಗಳು ಕಡಿಮೆ ಜನಸಂಖ್ಯೆ ಎಂಬ ನೆಪವೊಡ್ಡಿ ಪಿ.ಜಿ. ಪಾಳ್ಯ ಗ್ರಾಪಂ ವ್ಯಾಪ್ತಿಯ ಮಾಲಿಂಗನತ್ತ, ಬಸವನಗುಡಿ, ನಲ್ಲಿಮರದ ದೊಡ್ಡಿ ಹಾಗೂ ಇನ್ನಿತರ ಗ್ರಾಮಗಳನ್ನು ಯೋಜನೆಯಿಂದ ಕೈ ಬಿಡಲಾಗಿತ್ತು. ಇದರಿಂದ ನಿರಂತರ ಜ್ಯೋತಿ ಯೋಜನೆಯಿಂದ ಗ್ರಾಮವು ವಂಚಿತವಾಗಿತ್ತು. ಇದರಿಂದ ಬೇಸತ್ತ ಗ್ರಾಮಸ್ಥರು ಸೋಮವಾರ ಗ್ರಾಮದಲ್ಲೇ ಪ್ರತಿಭಟನೆ ನಡೆಸಿ ಇಲಾಖೆ ಅಧಿಕಾರಿಗಳ ಗಮನ ಸೆಳೆದಿದ್ದರು.


ಈ ದಿಸೆಯಲ್ಲಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಸೆಸ್ಕ್ ಉಪ ವಿಭಾಗದ ಇಇ ವಸಂತ್‌ಕುಮಾರ್, ಹನೂರು ಎಇಇ ಶಂಕರ್ ಹಾಗೂ ಸಿಬ್ಬಂದಿ ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿ ಕಾಮಗಾರಿ ಕೈಗೊಂಡು 24*7 ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net