ಮಾಲ್ದಾರೆಯಲ್ಲಿ ಬೀದಿ ನಾಯಿಗಳ ಹಾವಳಿ

Oplus_16908288
Oplus_16908288
Published on

ಸಿದ್ದಾಪುರ: ಕಾಡುಪ್ರಾಣಿಗಳ ಭಯದ ನಡುವೆ ಜೀವನ ನಡೆಸುತ್ತಿರುವ ಮಾಲ್ದಾರೆ ಸುತ್ತಮುತ್ತಲ ನಿವಾಸಿಗಳಿಗೆ ಇದೀಗ ಬೀದಿ ನಾಯಿಗಳ ಕಾಟ ಅಧಿಕವಾಗಿದೆ.

ದಿನದಿಂದ ದಿನಕ್ಕೆ ಬೀದಿ ನಾಯಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ನೆಮ್ಮದಿಯಾಗಿ ನಡೆದಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿ ಇದ್ದಕ್ಕಿದ್ದಂತೆ 50ಕ್ಕೂ ಹೆಚ್ಚು ಬೀದಿ ನಾಯಿಗಳು ದಿಢೀರ್ ಕಾಣಿಸಿಕೊಂಡಿದ್ದು ಯಾರೋ ನಾಯಿಗಳನ್ನು ಹಿಡಿದು ತಂದು ಬಿಟ್ಟಿರಬಹುದು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಆಹಾರಕ್ಕಾಗಿ ಮನೆ, ಹೋಟೆಲ್, ಅಂಗಡಿಗಳ ಮುಂದೆ ಜಮಾಯಿಸುತ್ತಿವೆ. ಗ್ರಾಮಸ್ಥರು ಭಯಭೀತರಾಗಿದ್ದು ಒಬ್ಬರೇ ಓಡಾಡಲು ಭಯಪಡುವಂತಾಗಿದೆ. ಸಣ್ಣ ಮಕ್ಕಳನ್ನು ಬಿಟ್ಟು ಕೆಲಸಕ್ಕೆ ತೆರಳುವ ಕಾರ್ಮಿಕರು ಬೀದಿ ನಾಯಿಗಳ ಹಾವಳಿಯಿಂದ ಮನೆಯಲ್ಲೇ ಉಳಿದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಸಮೀಪದ ಗ್ರಾಮವೊಂದರಲ್ಲಿ ಸೆರೆ ಹಿಡಿಯಲಾಗಿದ್ದ ನಾಯಿಗಳನ್ನು ಮಾಲ್ದಾರೆ ಗ್ರಾಮ ಸಮೀಪದ ಅರಣ್ಯದಂಚಿನಲ್ಲಿ ಬಿಟ್ಟು ಹೋಗಿದ್ದಾರೆ. ಇಲ್ಲಿಗೆ ಸೆರೆ ಹಿಡಿದ ನಾಯಿಗಳನ್ನು ತಂದು ಬಿಟ್ಟಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಕುಂಞಣ್ಣ, ಇಸ್ಮಾಯಿಲ್, ಆಟೋ ಸಂಘದ ಅಧ್ಯಕ್ಷ ಪದ್ಮೇಶ್, ಅರುಣ್, ಹನೀಫ ಮತ್ತಿತರರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net