ಮಾಲ್ದಾರೆಯಲ್ಲಿ ಮುಂದುವರಿದ ಅಹೋರಾತ್ರಿ ಪ್ರತಿಭಟನೆ

oplus_0
oplus_0
Published on

ಸಿದ್ದಾಪುರ: ಜನವಸತಿ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿಗೆ ವಿರೋಧ ವ್ಯಕ್ತಪಡಿಸಿ ಮಾಲ್ದಾರೆ ಗ್ರಾಮ ಪಂಚಾಯಿತಿ ಮುಂದೆ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆ ಶುಕ್ರವಾರ 5ನೇ ದಿನ ಪೂರೈಸಿತು.

ಕಳೆದ ಐದು ದಿನಗಳನ್ನು ನಡೆಯುತ್ತಿರುವ ಹೋರಾಟಕ್ಕೆ ಯಾವುದೇ ಅಧಿಕಾರಿಗಳು ಬಾರದೆ ಅಸಹಾಯಕತೆ ತೋರುತ್ತಿರುವ ಹಿನ್ನೆಲೆ ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ. ಬೇಡಿಕೆ ಈಡೇರುವರೆಗೂ ಹೋರಾಟ ಮುಂದುವರಿಸುವುದಾಗಿ ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಎಚ್ಚರಿಸಿದ್ದಾರೆ.

ಮಾಲ್ದಾರೆಯಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಕೊಡಗು- ಮೈಸೂರು ಲೋಕಸಭಾ ಸದಸ್ಯ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿದರು. ನಂತರ ತ್ಯಾಜ್ಯ ವಿಲೇವಾರಿಗೆ ನಿಗದಿಯಾಗಿರುವ ಸ್ಥಳವನ್ನು ಪರಿಶೀಲನೆ ಮಾಡಿ, ದೂರವಾಣಿ ಮೂಲಕ ಜಿಲ್ಲಾಧಿಕಾರಿ ಜತೆ ಮಾತುಕತೆ ನಡೆಸಿದರು.

ನಂತರ ವಿಜಯವಾಣಿ ಪತ್ರಿಕೆಯೊಂದಿಗೆ ಮಾತನಾಡಿ, ಜನವಸತಿ ಪ್ರದೇಶ ತೋಡು ನೀರು ಹರಿಯುವ ಸ್ಥಳ ಸೇರಿದಂತೆ ಹಲವು ಹಲವು ಕಾರಣಗಳಿದ್ದು, ತ್ಯಾಜ್ಯ ವಿಲೇವಾರಿಗೆ ಸೂಕ್ತವಾದ ಸ್ಥಳವಲ್ಲ. ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಶೀಲನೆಗೆ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭ ಭೀಮಪುತ್ರಿ ಬ್ರಿಗೇಡ್ ಸಂಘಟನೆಯ ಅಧ್ಯಕ್ಷೆ ರೇವತಿ ರಾಜ್, ಬಹುಜನ ಭಾಗ್ಯ ವಿಧಾತಾ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷ ಚೇತನ್ ಕುಮಾರ್, ಬಿಎಸ್‌ಪಿ ಉಸ್ತುವಾರಿ ಕಳ್ಳಿರ ಸುರೇಶ್, ಖಜಾಂಚಿ ಸರ ತಂಗಮ್ಮ, ಅಧ್ಯಕ್ಷರು ಉಮೇಶ್ ಉತ್ತಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net