

ಸಿದ್ದಾಪುರ: ಸಮೀಪದ ಮಾಲ್ದಾರೆಯಲ್ಲಿ ಮಂಗಳವಾರ ಬೆಳಗ್ಗೆ ಭಾರಿ ಗಾಳಿ, ಮಳೆಗೆ ಮರ ಬಿದ್ದು ಬೆಳೆಗಾರರೊಬ್ಬರು ಮೃತಪಟ್ಟಿದ್ದಾರೆ.
ಮಾಲ್ದಾರೆ ಗ್ರಾಮದ ಜನತಾ ಕಾಲನಿಯ ನಿವಾಸಿ ಬೆಳೆಗಾರ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪೊನ್ನಚಂಡ ಬೆಳ್ಳಿಯಪ್ಪ 64 (ವಿಷ್ಣು) ಮೃತ ದುರ್ದೈವಿಯಾಗಿದ್ದಾರೆ.
ಮಾಲ್ದಾರೆ ಗ್ರಾಮದ ಬೆಳ್ಳಿಯಪ್ಪ ಎಂಬುವರು ಮನೆಯಂಗಳದಲ್ಲಿ ನಿಂತಿದ್ದ ಸಂದರ್ಭದಲ್ಲಿ ಭಾರಿ ಗಾಳಿಗೆ ಮನೆಯ ಸಮೀಪವಿದ್ದ ಮಾವಿನಮರದ ಮುರಿದು ಬಿದ್ದಿದೆ. ಪರಿಣಾಮ ಬೆಳ್ಳಿಯಪ್ಪ ತಲೆಯ ಭಾಗಕ್ಕೆ ತೀವ್ರವಾಗಿ ಪೆಟ್ಟಾದ ಹಿನ್ನೆಲೆಯಲ್ಲಿ ಅವರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ
ಸ್ಥಳಕ್ಕೆ ಕಂದಾಯ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.