ಮಾಸ್ಕ್ ಧರಿಸಿ ವಿವಾಹ

h9-hasmukh-poonam
Published on

ಹುಬ್ಬಳ್ಳಿ: ಲಾಕ್​ಡೌನ್ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಹುಡುಗ ಹಾಗೂ ಸಿಂಧನೂರಿನ ಯುವತಿ ಮಾಸ್ಕ್ ಧರಿಸಿ, ಪರಸ್ಪರ ಅಂತರ ಕಾಯ್ದುಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಸಿಂಧನೂರಿನಲ್ಲಿ ಸರಳವಾಗಿ ಮದುವೆ ಸಮಾರಂಭ ಜರುಗಿದೆ. ವರ ಹಸ್ಮುಖ ಜೈನ್ ಹಾಗೂ ವಧು ಪೂನಂ ಸಚೇತಿ ವಿವಾಹವಾದವರು. ಲಾಕ್​ಡೌನ್ ಸಂದರ್ಭದಲ್ಲಿ ಮದುವೆಗಳಿಗೆ ಷರತ್ತುಬದ್ಧ ಅನುಮತಿ ಹಾಗೂ ಕೆಲ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗುತ್ತದೆ. ಅದರಂತೆ, ವಧು-ವರರು, ಕುಟುಂಬಸ್ಥರು ಮಾಸ್ಕ್ ಧರಿಸಿದ್ದರು. ಪರಸ್ಪರ ಅಂತರ ಕಾಯ್ದುಕೊಂಡಿದ್ದರು. ಬಿಇ ಸಿವಿಲ್ ಓದಿರುವ ಹಸ್ಮುಖ ಜೈನ್ ಹುಬ್ಬಳ್ಳಿಯಲ್ಲಿ ಖಾಸಗಿ ಕಂಪನಿ ನಡೆಸುತ್ತಿದ್ದು, ಜಿಲ್ಲಾಧಿಕಾರಿಯವರ ಅನುಮತಿ ಪಡೆದುಕೊಂಡು ಹುಬ್ಬಳ್ಳಿಯಿಂದ ಹತ್ತು ಜನರು ಮದುವೆ ಕಾರ್ಯಕ್ಕೆ ತೆರಳಿದ್ದರು. ಸರಳವಾಗಿ ನಡೆದ ಮದುವೆ ಸಮಾರಂಭದಲ್ಲಿ ವಧು ವರರ ಕಡೆಯಿಂದ 20 ಜನರು ಭಾಗಿಯಾಗಿದ್ದರು. ಮದುವೆ ಕಾರ್ಯದ ನಂತರ ವಧು-ವರರು ಹುಬ್ಬಳ್ಳಿಗೆ ಆಗಮಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net