ಮಾಸ್ತಮ್ಮ ದೇವಿಯ ಭವ್ಯ ಮೆರವಣಿಗೆ

Masthamma Devi
Published on

ಚಿತ್ರದುರ್ಗ: ಸಂಕ್ರಾಂತಿ ಹಬ್ಬ ಹಾಗೂ ಧನುರ್ಮಾಸ ಪೂಜೆ ಅಂಗವಾಗಿ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ದೇವಿ ಮೆರವಣಿಗೆ ಮಂಗಳವಾರ ರಾಜಬೀದಿಗಳಲ್ಲಿ ಅದ್ದೂರಿಯಾಗಿ ಜರುಗಿತು.

ದೇವಿಯ ಭಾವಚಿತ್ರವನ್ನು ಟ್ರಾೃಕ್ಟರ್‌ನಲ್ಲಿ ಇರಿಸಿ ಪುಷ್ಪಗಳಿಂದ ಸಿಂಗರಿಸಲಾಯಿತು. ನಂತರ ರಾಜಮಾತೆ ಉಚ್ಚಂಗಿಯಲ್ಲಮ್ಮ ದೇಗುಲ ಮುಂಭಾಗದಿಂದ ಆರಂಭವಾದ ಮೆರವಣಿಗೆ ದೊಡ್ಡಪೇಟೆ, ರಂಗಯ್ಯನಬಾಗಿಲು, ಜೋಗಿಮಟ್ಟಿ ರಸ್ತೆ ಮಾರ್ಗವಾಗಿ ಸಂಚರಿಸಿ ದೇಗುಲ ತಲುಪಿತು.

ನೂರಾರು ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಗೆ ಮೆರುಗು ನೀಡಿದರು. ಉರುಮೆ, ತಮಟೆ, ಡೊಳ್ಳು ಸೇರಿ ಇತರೆ ಜನಪದ ಕಲಾತಂಡಗಳ ಮಂಗಳವಾದ್ಯದೊಂದಿಗೆ ಸಾಗಿತು. ಯುವಕರು ಕುಣಿದು ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net