ಮಾಸ್ತಿ ಕನ್ನಡದ ಆಸ್ತಿ ಕಾರ್ಯಕ್ರಮ

19rajesh7
Published on

ಚಾಮರಾಜನಗರ: ಕನ್ನಡ ಸಾಹಿತ್ಯ ಪರಂಪರೆಗೆ ತನ್ನದೇಯಾದ ಕೊಡುಗೆಯನ್ನು ನೀಡಿದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಕನ್ನಡದ ಆಸ್ತಿಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ತಿಳಿಸಿದರು.

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಾಸ್ತಿ ಕನ್ನಡದ ಆಸ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು ಅಧಿಕಾರಿಗಳಾಗಿ, ಸಾಹಿತಿಗಳಾಗಿ ರಾಷ್ಟ್ರಕ್ಕೆ ಗೌರವವನ್ನು ತಂದವರು. ಸಣ್ಣ ಕಥೆಗಳ ಜನಕರಾಗಿ ಶ್ರೀನಿವಾಸ ಎಂಬ ಕಾವ್ಯನಾಮದಿಂದ ಕಾದಂಬರಿ, ಕಾವ್ಯ, ನಾಟಕ, ಜೀವನ ಚರಿತ್ರೆ, ಪ್ರಬಂಧ, ವಿಮರ್ಶೆ, ಸಂಪಾದನೆ, ಅನುವಾದ ಧಾರ್ಮಿಕ ಕೃತಿಗಳು, ಜೀವನ ಚರಿತ್ರೆಗಳನ್ನು ರಚಿಸಿ ಕನ್ನಡ ಸಾಹಿತ್ಯವನ್ನು ವಿಶ್ವವಿಖ್ಯಾತಗೊಳಿಸಿದ್ದಾರೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯ ಬಿ.ಕೆ ಆರಾಧ್ಯ ಮಾತನಾಡಿ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಜೀವನ ಮತ್ತು ಸಾಹಿತ್ಯ ಕೊಡುಗೆ ಅಧ್ಯಯನ ಬಹಳ ಮುಖ್ಯವಾದದ್ದು ಎಂದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ಸರಸ್ವತಿ, ಎಸ್.ಲಕ್ಷ್ಮೀನರಸಿಂಹ, ಶಿವಲಿಂಗಮೂರ್ತಿ, ಪದ್ಮಾ ಪುರುಷೋತ್ತಮ್, ರವಿಚಂದ್ರ ಪ್ರಸಾದ್, ಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net