ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ

CTD 0008
Published on

ಚಿತ್ರದುರ್ಗ: ಜಿಲ್ಲೆಯಲ್ಲಿ ಖಾಲಿ ಇರುವ ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಯನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಬಿಇ, ಬಿ.ಟೆಕ್, ಬಿಸಿಎ-ಕಂಪ್ಯೂಟರ್ ವಿಜ್ಞಾನ, ಮಾಹಿತಿ ವಿಜ್ಞಾನ, ಇಂಜಿನಿಯರಿಂಗ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಟೆಲಿಕಾಂ ವಿಷಯದಲ್ಲಿ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳು ಮಾ.27ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಖುದ್ದು ಹಾಜರಾಗಿ ಪತ್ರಾಂಕಿತ ಕಚೇರಿ ಸಹಾಯಕರು, ಜಿಲ್ಲಾಧಿಕಾರಿ ಕಚೇರಿ, ಚಿತ್ರದುರ್ಗ ಜಿಲ್ಲೆ ಇವರಿಗೆ ಸಲ್ಲಿಸಬೇಕೆಂದು ಡಿಸಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

-----------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net