ಮಾಹಿತಿ ನೀಡಿದರೆ ಸೂಕ್ತ ಕ್ರಮ

Mahesh
Published on

ಚಾಮರಾಜನಗರ: ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಹೋಟೆಲ್, ಅಂಗಡಿ, ಗ್ಯಾರೇಜ್ ಹಾಗೂ ಇನ್ನಿತರೆ ಕಡೆಗಳಲ್ಲಿ ಮಕ್ಕಳು ಕೆಲಸ ಮಾಡುತ್ತಿದ್ದರೇ ಮಾಹಿತಿ ದೊರೆಯುತ್ತದೆ ಎಂದು ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ಮಹೇಶ್ ತಿಳಿಸಿದರು.

ಬಾಲಕಾರ್ಮಿಕ ಇಲಾಖೆಯಿಂದ ಹಲವಾರು ಮಕ್ಕಳನ್ನು ಕೆಲಸ ಬಿಡಿಸಿ ಶಾಲೆಗೆ ಸೇರಿಸಲಾಗಿದೆ. ಆದರೇ ವಲಸೆ ಹೋಗುವ ಮಕ್ಕಳನ್ನು ಪತ್ತೆಹಚ್ಚಲು ಕಷ್ಟವಾಗುತ್ತದೆ. ಮಕ್ಕಳು ಶಾಲೆಯನ್ನು ಬಿಟ್ಟು ದುಡಿಮೆಯಲ್ಲಿ ತೊಡಗಿಕೊಂಡಿದ್ದರೇ, ಯಾರಾದರೂ ಮಾಹಿತಿ ನೀಡಿದರೇ ಸಾಕು ನಾವು ಕ್ರಮವಹಿಸುತ್ತೇವೆ. ಶಿಕ್ಷಣದಿಂದ ಮಕ್ಕಳು ವಂಚಿತರಾಗದಂತೆ ತಡೆಯಲು ಬಾಳಕಾರ್ಮಿಕ ಇಲಾಖೆಯೂ ಹಲವಾರು ಪ್ರಯತ್ನಗಳನ್ನು ಮಾಡುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net