ಮಿತವಾಗಿ ಬಳಸುವಷ್ಟೇ ನೀರು ಪೂರೈಸಿ

10 KAMPLI 04
Published on

ಕಂಪ್ಲಿ: ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿವ ನೀರಿನ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ಅಧಿಕಾರಿಗಳಿಗೆ ತಹಸೀಲ್ದಾರ್ ಎಸ್.ಶಿವರಾಜ ಸೂಚನೆ ನೀಡಿದರು.

ತಹಸಿಲ್ ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೋಮವಾರ ಮಾತನಾಡಿದರು. ತಾಪಂ.ಇಒ ಆರ್.ಕೆ.ಶ್ರೀಕುಮಾರ್ ಮಾತನಾಡಿ, ಬಿಲ್ ಪಾವತಿಸಿಲ್ಲ ಎಂದು ಬೇಸಿಗೆಯಲ್ಲಿ ಕುಡಿವ ನೀರಿನ ಘಟಕದ ವಿದ್ಯುತ್ ಸಂಪರ್ಕ ಕಡಿತಗೊಳಿಸಬಾರದೆಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಮಿತವಾಗಿ ಬಳಸುವಷ್ಟು ಮಾತ್ರ ನೀರು ಪೂರೈಸಬೇಕು. ನೀರು ಬಳಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಿ, ಅಗತ್ಯ ಬಿದ್ದರೆ ಬಾಡಿಗೆಗೆ ಪಡೆದುಕೊಳ್ಳುವಂತೆ ಸೂಚನೆ ನೀಡಿದರು.

ಪುರಸಭೆ ಜೆಇ ಮೇಘನಾ ಮಾತನಾಡಿ, ಪಟ್ಟಣದ 23ವಾರ್ಡ್‌ಗಳಲ್ಲಿ ಎರಡು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಮೇನಲ್ಲಿ ಕುಡಿವ ನೀರಿನ ತೊಂದರೆ ಎದುರಾಗುವ ಸಾಧ್ಯತೆಯಿದೆ. ನದಿಯಲ್ಲಿ ರಿಂಗ್‌ಬಂಡ್ ಹಾಕಿ ನೀರು ಪೂರೈಸಲಾಗುವುದು ಎಂದು ತಿಳಿಸಿದರು. ಉಪ ತಹಸೀಲ್ದಾರ್ ಬಿ.ರವೀಂದ್ರಕುಮಾರ್, ಶಿರಸ್ತೇದಾರ್ ಎಸ್.ಡಿ.ರಮೇಶ್, ಪಿಡಿಒ, ಕಾರ್ಯದರ್ಶಿಗಳು, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net